ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತ್ಯದರ್ಶನ ಸಭೆಯ ಮೆರವಣಿಗೆಗೆ ಭಾರಿ ಸಂಖ್ಯೆಯಲ್ಲಿ ಸೇರಿದ ‌ಭಕ್ತರು

Last Updated 23 ಫೆಬ್ರುವರಿ 2020, 7:39 IST
ಅಕ್ಷರ ಗಾತ್ರ
ADVERTISEMENT
""
""
""

ಹುಬ್ಬಳ್ಳಿ: ನಗರದ ಮೂರು ಸಾವಿರ ಮಠದ ಉತ್ತರಾಧಿಕಾರಿ ನೇಮಕ ವಿವಾದಕ್ಕೆ ಸಂಬಂಧಿಸಿದಂತೆ, ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನೆಹರೂ ಮೈದಾನದಿಂದ ಮಠದವರೆಗೆ ನಡೆಯಲಿರುವ ಮೆರವಣಿಗೆಗೆ ಸ್ವಾಮೀಜಿ ಬೆಂಬಲಿಗರು ಸಾಕಷ್ಟು ಸಂಖ್ಯೆಯಲ್ಲಿಜಮಾಯಿಸುತ್ತಿದ್ದಾರೆ.

ಸಭೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ, ಮೈದಾನ ಹಾಗೂ ಮಠದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಪೊಲೀಸ್ ಬಂದೋಬಸ್ತ್

ಹುಬ್ಬಳ್ಳಿಯ ಮೂರುಸಾವಿರ ಮಠದಲ್ಲಿ ಆಯೋಜಿಸಿರುವ ಸತ್ಯ ದರ್ಶನ ಸಭೆಗೆ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಬಂದಿರುವ ಭಕ್ತರನ್ನು ಬಿಗಿಬಂದೋಬಸ್ತ್‌ನಲ್ಲಿಯೇ ಮೈದಾನದ ಒಳಗೆ ಬಿಡಲಾಗುತ್ತಿದೆ. ಮಠದ ಉತ್ತರಾಧಿಕಾರಿ ವಿವಾದ ಬಗೆಹರಿಸಬೇಕು ಎಂಬುದು ಅವರ ಆಗ್ರಹವಾಗಿದೆ.

ದಿಂಗಾಲೇಶ್ವರ ಸ್ವಾಮೀಜಿ
ಪಾದಯಾತ್ರೆಗೂ ಮುನ್ನ‌ ದಿಂಗಾಲೇಶ್ವರ ಸ್ವಾಮೀಜಿ
ನಗರದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಮಠದೊಳಗೆ ಸತ್ಯದರ್ಶನ ಸಭೆಗೆ ಅನುಮತಿ ನಿರಾಕರಣೆ

ಮೂರು ಸಾವಿರ ಮಠದ ಉತ್ತರಾಧಿಕಾರಿ ನೇಮಕ ವಿವಾದಕ್ಕೆ ಸಂಬಂಧಿಸಿದಂತೆ, ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಸತ್ಯ ದರ್ಶನ ಸಭೆಗೆ ಪೊಲೀಸರುಅನುಮತಿ ನಿರಾಕರಿಸಿದ್ದಾರೆ. ಇದನ್ನು ಖಂಡಿಸಿ, ಮಠದ ದ್ವಾರದ ಎದುರು ಬೆಂಬಲಿಗರನ್ನು ಉದ್ದೇಶಿಸಿ ಸ್ವಾಮೀಜಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT