ಸೋಮವಾರ, ಮಾರ್ಚ್ 20, 2023
24 °C

25ರಂದು ಸಿಎಂಗೆ ಮೃತ್ಯುಂಜಯ ಮಹಾಂತ ಪ್ರಶಸ್ತಿ ಪ್ರದಾನ: ಮಲ್ಲಿಕಾರ್ಜುನ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ‘ಮದಥಣಿ ಮುರುಘೇಂದ್ರ ಮಹಾಶಿವಯೋಗಿಗಳ 93ನೇ ಜಾತ್ರಾ ಮಹೋತ್ಸವದ ಅಂಗವಾಗಿ ಜ. 25ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮೃತ್ಯುಂಜಯ ಮಹಾಂತ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಮುರುಘಾಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ತಿಳಿಸಿದರು.

‘ಜಾತ್ರಾ ಮಹೋತ್ಸವದ ಅಂಗವಾಗಿ ಜ. 22ರಿಂದ 26ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಇದರಲ್ಲಿ ಗ್ರಂಥ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ, ಶಿವಾನುಭವ ಚಿಂತನೆ, ವಚನ ನೃತ್ಯ ಹಾಗೂ ಗಾಯನ ಸಮಾರಂಭಗಳು ಜರುಗಲಿವೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ. ತೋಂಟದ ಸಿದ್ದರಾಮ ಸ್ವಾಮೀಜಿ, ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಅರವಿಂದ ಬೆಲ್ಲದ ಹಾಗೂ ಅಮೃತ ದೇಸಾಯಿ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಶಿವಲೀಲಾ ಕುಲಕರ್ಣಿ ವಹಿಸಲಿದ್ದಾರೆ. ಜ. 26ರಂದು ಸಂಜೆ 4ಕ್ಕೆ ಮುರುಘೇಂದ್ರ ಮಹಾಶಿವಯೋಗಿಗಳ ರಥೋತ್ಸವ ನಡೆಯಲಿದೆ’ ಎಂದು ಸ್ವಾಮೀಜಿ ತಿಳಿಸಿದರು.

ನಾಗರಾಜ ಪಟ್ಟಣಶೆಟ್ಟಿ, ಡಿ.ಬಿ. ಲಕಮನಹಳ್ಳಿ, ಶಿವಶಂಕರ ಹಂಪಣ್ಣವರ, ಸಿದ್ದರಾಮಣ್ಣ ಲಕ್ಷ್ಮೇಶ್ವರ, ಸಿ.ಎಸ್. ಪಾಟೀಲ, ವಿರುಪಾಕ್ಷಪ್ಪ ಕಟಗಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು