ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗುರುವಿನ ಶಕ್ತಿ; ಬೆಳಕಿನ ಮಾರ್ಗ’

Published 9 ಜೂನ್ 2024, 6:55 IST
Last Updated 9 ಜೂನ್ 2024, 6:55 IST
ಅಕ್ಷರ ಗಾತ್ರ

ಧಾರವಾಡ: ಪಂಡಿತ ಬಸವರಾಜ ರಾಜಗುರು ಎಂದರೆ ಸಂಗೀತ ಶ್ರೀಮಂತಿಕೆ. ರಾಜಗುರು ತಮ್ಮ ಅನೇಕ ಶಿಷ್ಯರ ಬಾಳಿಗೆ ಬೆಳಕಾಗಿದ್ದರು ಎಂದು ಉದಾತ್ತ ಕಲಾ ಅಕಾಡೆಮಿ ಗೌರವ ನಿರ್ದೇಶಕ ಶಾಂತಾರಾಮ ಹೆಗಡೆ ಹೇಳಿದರು.

ಉದಾತ್ತ ಕಲಾ ಅಕಾಡೆಮಿ, ಕುಮಾರೇಶ್ವರ ಕಲ್ಚರಲ್ ಸೊಸೈಟಿ ಹಾಗೂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಆಲೂರು ವೆಂಕಟರಾವ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ಬಸವರಾಜ ರಾಜಗುರು ಸ್ಮತಿ ಸಂಗೀತೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗುರುವಿನ ಶಕ್ತಿ ನಿರಂತರ ಬೆಳಕಿನೆಡೆಗೆ ಕರೆದೊಯ್ಯುತ್ತದೆ. ಅದೇ ರೀತಿ ಬಸವರಾಜ ರಾಜಗುರು ಅವರು ತೋರಿದ ಹಾದಿಯಲ್ಲಿ ಸಾಗುತ್ತಿರುವ ಅವರ ಶಿಷ್ಯರು ವಿಶೇಷ ಸಾಧನೆ ಮಾಡಿ ಗುರುಗಳ ಕೀರ್ತಿ ವೃದ್ಧಿಯಲ್ಲಿ ತೊಡಗಿದ್ದಾರೆ ಎಂದರು.

ಆಕಾಶವಾಣಿ ನಿವೃತ್ತ ಉದ್ಘೋಷಕ ಶಶಿಧರ ನರೇಂದ್ರ ಮಾತನಾಡಿ, ಬಸವರಾಜ ರಾಜಗುರು, ಭೀಮಸೇನ ಜೋಶಿ, ಗಂಗೂಬಾಯಿ ಹಾನಗಲ್, ಮಲ್ಲಿಕಾರ್ಜುನ ಮನಸೂರ ಅವರು ತಮ್ಮ ಸಂಗೀತ ಸಾಧನೆ ಮೂಲಕ ಧಾರವಾಡಕ್ಕೆ ಹೆಮ್ಮೆ ತಂದಿದ್ದಾರೆ ಎಂದರು.

ಗಾಯಕ ವಿವೇಕ ಹೆಗಡೆ ಹಾಗೂ ಹಿಂದೂಸ್ತಾನಿ ಗಾಯಕ ಪರಮೇಶ್ವರ ಹೆಗಡೆ ಗಾಯನ ಪ್ರಸ್ತುತ ಪಡಿಸಿದರು. ಅವರಿಗೆ ಕಲಾವಿದೆ ಸೃಷ್ಟಿ ಸುರೇಶ ಸಿತಾರ ವಾದನ, ಗೋಪಾಲಕೃಷ್ಣ ಹೆಗಡೆ ಕಲಭಾಗ, ಅಲ್ಲಮಪ್ರಭು ಕಡಕೋಳ ತಬಲಾ ಹಾಗೂ ಸತೀಶ ಭಟ್ ಹಾರ್ಮೊನಿಯಂ ಸಾಥ್ ನೀಡಿದರು.

ಪಂಡಿತ ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಸದಸ್ಯೆ ಭಾರತಿದೇವಿ ರಾಜಗುರು, ಆಕಾಶವಾಣಿ ನಿವೃತ್ತ ಉದ್ಘೋಷಕ ಶಶಿಧರ ನರೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ನಿಜಗುಣ ರಾಜಗುರು, ಕುಮಾರೇಶ್ವರ ಕಲ್ಚರಲ್ ಸೊಸೈಟಿ ಅಧ್ಯಕ್ಷ ಮಲ್ಲಿಕಾರ್ಜುನ ಚಿಕ್ಕಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT