ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ಇಲ್ಲಿನ ಪ್ರಾದೇಶಿಕ ಕೇಂದ್ರದಲ್ಲಿ ವಿವಿಧ ಕೋರ್ಸ್‌ಗಳನ್ನು ಆರಂಭಿಸಲಾಗುವುದು. ಅದಕ್ಕೆ ತಕ್ಕಂತೆ ಇಲ್ಲಿ ಸೌಲಭ್ಯ ಕಲ್ಪಿಸಲು ಅನುದಾನ ಅಗತ್ಯ ಇದೆ.
– ನಾಗೇಶ್ ವಿ.ಬೆಟ್ಟಕೋಟೆ, ಕುಲಪತಿ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿ.ವಿ ಮೈಸೂರು
ಗಂಗೂಬಾಯಿ ಹಾನಗಲ್ ಅವರ ಧಾರವಾಡದ ಮನೆ ಪಾಳು ಬಿದ್ದಿದೆ. ಸರ್ಕಾರದ ಅದನ್ನು ಸ್ಮಾರಕವಾಗಿ ರಕ್ಷಣೆ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿದೆ. ಗುರು ಶಿಷ್ಯ ಪರಂಪರೆಯ ಗಂಗೂಬಾಯಿ ಹಾನಗಲ್ ಭಾರತೀಯ ಶಾಸ್ತ್ರೀಯ ಸಂಗೀತ ಗುರುಕುಲ ಈಗ ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರವಾಗಿದೆ. ಅದನ್ನಾದರೂ ಸಮರ್ಪಕವಾಗಿ ನಡೆಸಿಕೊಂಡು ಹೋಗಬೇಕು. ಅಗತ್ಯ ಸೌಲಭ್ಯ ಕಲ್ಪಿಸಲು ಅನುದಾನ ನೀಡಬೇಕು. ಅಜ್ಜಿಯ ಹೆಸರುಳಿಸುವ ಕೆಲಸ ಮಾಡಬೇಕು.
– ವೈಷ್ಣವಿ ಹಾನಗಲ್, ಗಂಗೂಬಾಯಿ ಹಾನಗಲ್ ಅವರ ಮೊಮ್ಮಗಳು ಮತ್ತು ವಿ.ವಿಯ ಪ್ರಾದೇಶಿಕ ಕೇಂದ್ರದ ಪ್ರಾಧ್ಯಾಪಕಿ