ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ನಡ ಭಾಷಾ ಅಭಿವೃದ್ಧಿ ಮಸೂದೆ’ ಅನುಷ್ಠಾನ ಅನುಮಾನ: ನಾಗಾಭರಣ

Last Updated 30 ಜುಲೈ 2022, 18:34 IST
ಅಕ್ಷರ ಗಾತ್ರ

ಧಾರವಾಡ: ‘ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ ಮಸೂದೆ’ಯ ಕರಡನ್ನು ಮುಖ್ಯಮಂತ್ರಿಗಳಿಗೆ ಶೀಘ್ರವೇ ಸಲ್ಲಿಸಲಾಗುವುದು. ಆದರೆ ಈ ಮಸೂದೆಯ ಅನುಷ್ಠಾನ ಕುರಿತು ನನಗೂ ಅನುಮಾನಗಳಿವೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಹೇಳಿದರು.

ಕನ್ನಡ ಭಾಷಾ ಅನುಷ್ಠಾನ ಕುರಿತು ಶನಿವಾರ ವಿವಿಧ ಇಲಾಖೆಗಳೊಂದಿಗೆ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ನ್ಯಾಯಮೂರ್ತಿ ಎಸ್‌.ಆರ್. ಬನ್ನೂರಮಠ ಅವರ ನೇತೃತ್ವದಲ್ಲಿ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಮಸೂದೆ-2022ರ ಕರಡನ್ನು ಸಿದ್ಧಪಡಿಸಲಾಗಿದೆ. ಇದು ಅನುಷ್ಠಾನಗೊಂಡಲ್ಲಿ ಸರೋಜಿನಿ ಮಹಿಷಿ ವರದಿಯೂ ಸೇರಿದಂತೆ ಕನ್ನಡ ಅನುಷ್ಠಾನಕ್ಕೆ ಕಾನೂನು ಬಲ ಸಿಗಲಿದೆ’ ಎಂದರು.

‘ಕನ್ನಡ ಉಳಿಸುವ ಕುರಿತು ಸರ್ಕಾರ ಉತ್ಸಾಹ ತೋರಿಸುತ್ತದೆ. ಆದರೆ ಅನುಷ್ಠಾನಗೊಳಿಸಬೇಕಾದ ಅಧಿಕಾರಿಗಳಿಂದ ಆ ಮಟ್ಟದ ಸಹಕಾರ ಸಿಗುತ್ತಿಲ್ಲ. ಹೀಗಾಗಿ ಯಾವುದೇ ಅಧಿವೇಶನದಲ್ಲಿ ಮಂಡನೆಯಾಗಬಹುದಾದ ಈ ಮಸೂದೆಯ ಸಮರ್ಪಕ ಜಾರಿ ಕುರಿತು ಸಂದೇಹಗಳಿವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT