ಹುಬ್ಬಳ್ಳಿ: ಶೆಫರ್ಡ್ ಇಂಡಿಯಾ ಸಂಘಟನೆಯ 9ನೇ ರಾಷ್ಟ್ರೀಯ ಸಮಾವೇಶವನ್ನು ಬೆಳಗಾವಿಯಲ್ಲಿ ಅಕ್ಟೋಬರ್ 2-3 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಮುಖಂಡ ಎಚ್.ಎಂ. ರೇವಣ್ಣ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಅ.2ರಂದು ಕಾರ್ಯಕಾರಿಣಿ ಸಭೆ ನಡೆಯಲಿದೆ. ಅ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಗುವುದು ಎಂದು ನುಡಿದರು.
ದೇಶದ ವಿವಿಧ ರಾಜ್ಯಗಳಲ್ಲಿರುವ ಕುರುಬ ಸಮುದಾಯದ ಜನಪ್ರತಿನಿಧಿಗಳು ಹಾಗೂ ಪ್ರಮುಖರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮ ಪಕ್ಷಾತೀತವಾಗಿ ನಡೆಯಲಿದ್ದು, ಬಿಜೆಪಿಯ ಕೆ.ಎಸ್. ಈಶ್ವರಪ್ಪ ಸೇರಿದಂತೆ ಸಮುದಾಯದ ಎಲ್ಲ ಪ್ರಮುಖ ನಾಯಕರನ್ನು ಆಹ್ವಾನಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಂಘಟನೆಯ ಅಧ್ಯಕ್ಷ ಎಚ್.ವಿಶ್ವನಾಥ ಮಾತನಾಡಿ, ದೇಶದಾದ್ಯಂತ ಹರಿದುಹಂಚಿ ಹೋಗಿರುವ ಕುರುಬ ಸಮುದಾಯದವರನ್ನು ಒಗ್ಗೂಡಿಸುವ ಸಲುವಾಗಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.