ಧಾರವಾಡ: ‘ಸಾರ್ವಜನಿಕರ ಆರೋಗ್ಯ ರಕ್ಷಣೆಯು ಸರ್ಕಾರದ ಜವಾಬ್ದಾರಿ ಮಾತ್ರ ಅಲ್ಲ, ಎಲ್ಲ ನಾಗರಿಕರ ಜವಾಬ್ದಾರಿಯೂ ಆಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ ಪಾಟೀಲ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಸಹಯೋಗದಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಹೆಪಟೈಟಿಸ್ ದಿನಾಚರಣೆ ಮತ್ತು ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗ್ರಾಮೀಣ ಹಾಗೂ ಕೊಳಚೆ ಪ್ರದೇಶಗಳಲ್ಲಿನ ಜನರಿಗೆ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಅರಿವು ಮೂಡಿಸಬೇಕಿದೆ’ ಎಂದು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಂ.ಹೊನಕೇರಿ ಮಾತನಾಡಿ, ‘ಹೆಪಟೈಟಿಸ್ ಬೇಗನೆ ಹರಡುವ ರೋಗವಾಗಿದ್ದು, ಸಮಯಕ್ಕೆ ತಕ್ಕ ಚಿಕಿತ್ಸೆ, ಲಸಿಕೆ ಹಾಗೂ ಆರೋಗ್ಯಕರ ಜೀವನಶೈಲಿ ಅನುಸರಿಸುವ ಮೂಲಕ ತಡೆಗಟ್ಟಬಹುದು’ ಎಂದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ರವೀಂದ್ರ ಬೊವೇರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್.ಪಾತ್ರೋಟ, ಆರೋಗ್ಯ ಸಂಸ್ಥೆ ಸಲಹೆಗಾರರ ಡಾ.ಸತೀಶ್ ಘಾಟಕೆ, ಡಾ.ಮಹೇಶ ಚಿತ್ತರಗಿ, ಡಾ. ಕಿರಣ ಕುಲಕರ್ಣಿ, ಎನ್.ಎಂ.ಅಗಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.