ಸೋಮವಾರ, ನವೆಂಬರ್ 29, 2021
20 °C

ಹುಬ್ಬಳ್ಳಿ: ಕಳಸಾ ಬಂಡೂರಿ ಜಾರಿಗೆ ಆಗ್ರಹ, ಟೋಲ್ ಬಂದ್ ಮಾಡಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕೃಷಿ ಕಾಯ್ದೆ ಹಿಂಪಡೆಯುವುದು, ಸ್ವಾಮಿನಾಥನ್ ಆಯೋಗದ ವರದಿ ಜಾರಿ ಹಾಗೂ ಕಳಸಾ ಬಂಡೂರಿ ಕಾಮಗಾರಿ ತಕ್ಷಣ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಸದಸ್ಯರು ನಗರದ ಗಬ್ಬೂರು ಬೈ ಪಾಸ್ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಹತ್ತು ನಿಮಿಷ ಟೋಲ್ ಬಂದ್ ಮಾಡಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ ಪ್ರತಿಭಟನಾಕಾರರು, ನಂತರ ಬೆಂಗಳೂರು-ಪೂನಾ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ‌ ಧರಣಿ ಕುಳಿತರು.

ಕೃಷಿ ಕಾಯ್ದೆ ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಆದರೆ, ಅದು ಭರವಸೆಯಷ್ಟೇ ಆಗದೆ ಕಾರ್ಯರೂಪಕ್ಕೆ ಬರಬೇಕು. ಕಳಸಾ ಬಂಡೂರಿ ಯೋಜನೆ ಕಾಮಗಾರಿ ಸಹ ಆರಂಭವಾಗುತ್ತಿಲ್ಲ. ಅದನ್ನು ಸಹ ತಕ್ಷಣ ಆರಂಭಿಸಬೇಕು. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನು‌ ರಚನೆಯಾಗಬೇಕು. ಅತಿವೃಷ್ಟಿಯಿಂದಾದ ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಸಿದ್ದು ತೇಜಿ, ಬಾಬಾಜಾನ ಮೂದೋಳ , ರಾಜಶೇಖರ‌ ಮೆಣಸಿನಕಾಯಿ, ಇಮ್ತಿಯಾಜ್ ಬಿಳಿಪಸಾರ, ಶೋಬಾ ಕಮತರ, ಬಿ.ಎ. ಮೂದೋಳ. ಎ.ಎಸ್. ಫಿರ್ಜಾದೆ, ಹಾಲಬಾವಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು