ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 14, 15ಕ್ಕೆ ಆಯುರ್ವೇದ ಚಿಕಿತ್ಸಾ ರಾಷ್ಟ್ರೀಯ ಕಾರ್ಯಾಗಾರ: ಗೋವಿಂದ ಜೋಶಿ

Last Updated 10 ಮೇ 2022, 13:16 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಆರೋಗ್ಯ ಭಾರತಿ ಕರ್ನಾಟಕ ವತಿಯಿಂದ ಹೆಗ್ಗೇರಿಯ ಆಯುರ್ವೇದ ಮಹಾವಿದ್ಯಾಲಯದಲ್ಲಿ ಆಯುರ್ವೇದ ಶಲ್ಯ, ಶಾಲಕ್ಯ ಮತ್ತು ಸ್ತ್ರೀರೋಗ ಹಾಗೂ ಪ್ರಸೂತಿ ತಂತ್ರ ವಿಭಾಗಗಳಲ್ಲಿ ಶಸ್ತ್ರಚಿಕಿತ್ಸೆ ಮತ್ತು ಪ್ರಸೂತಿ ತಂತ್ರ ವಿಭಾಗಗಳಲ್ಲಿ ಶಸ್ತ್ರಚಿಕಿತ್ಸೆ ಮತ್ತು ಪಂಚಕರ್ಮ ಚಿಕಿತ್ಸೆಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಮೇ 14 ಮತ್ತು 15ರಂದು ಆಯೋಜಿಸಲಾಗಿದೆ’ ಎಂದು ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿ ಅಧ್ಯಕ್ಷ ಗೋವಿಂದ ಜೋಶಿ ಹೇಳಿದರು.

‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದಡಿ ಸಂಜೀವಿನಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ವರೂರಿನ ಜೈನ್ ಎಜಿಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಧಾರವಾಡದ ಸಿ.ಬಿ. ಗುತ್ತಲ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಮಹಾಗಣಪತಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘14ರಂದು ಬೆಳಿಗ್ಗೆ 10.30ಕ್ಕೆ ಆರೋಗ್ಯ ಭಾರತಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಡಾ. ಅಶೋಕಕುಮಾರ ವಾರ್ಷಣೇಯ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಆರ್‌ಜಿಯುಎಚ್‌ಎಸ್‌ ಸಿಂಡಿಕೇಟ್ ಸದಸ್ಯ ಡಾ. ಗಜಾನನ ಹೆಗಡೆ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿ ಅಧ್ಯಕ್ಷ ಗೋವಿಂದ ಜೋಶಿ ವಹಿಸಲಿದ್ದಾರೆ. 15ರಂದು ಸಮಾರೋಪ ಸಮಾರಂಭ ನಡೆಯಲಿದೆ’ ಎಂದರು.

‘ಕಾರ್ಯಾಗಾರಕ್ಕೆ ವಿದೇಶಗಳ ಖ್ಯಾತ ವೈದ್ಯರು ಮತ್ತು ವಿವಿಧ ರಾಜ್ಯಗಳ ಆಯುರ್ವೇದ ವಿದ್ಯಾಸಂಸ್ಥೆಗಳಿಂದ 500ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಆಯುರ್ವೇದದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ವೈದ್ಯರಿಗೆ ಕೌಶಲ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕಾರ್ಯಾಗಾರ ಕುರಿತ ಮಾಹಿತಿಗೆ ಮೊ: 9448565198 ಸಂಪರ್ಕಿಸಬಹುದಾಗಿದೆ’ ಎಂದು ತಿಳಿಸಿದರು.

ಡಾ. ಸಿದ್ದನಗೌಡ ಪಾಟೀಲ, ಡಾ.ಎ.ಎಸ್. ಪ್ರಶಾಂತ, ಅಶೋಕ ಕುಮಾರ, ಕೆ.ಆರ್. ಜೋಶಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT