ನವಲಗುಂದ: ‘ಮುಂಗಾರು ಹಂಗಾಮಿನಲ್ಲಿ ರೈತರ ಬಿತ್ತನೆ ಕಾರ್ಯಕ್ಕೆ ತೊಂದರೆಯಾಗದಂತೆ ಕೃಷಿ ಇಲಾಖೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ರೈತರಿಗೆ ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳನ್ನು ನಿಗದಿತ ದರದಲ್ಲಿ ಪೂರೈಸಬೇಕು’ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ವಾಲ್ಮೀಕಿ ಸಭಾಭವನದಲ್ಲಿ ಮಂಗಳವಾರ ನವಲಗುಂದ, ಅಣ್ಣಿಗೇರಿ ಮತ್ತು ಹುಬ್ಬಳ್ಳಿ ತಾಲ್ಲೂಕುಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ತಾಲ್ಲೂಕಿನ ಗೊಬ್ಬರಗುಂಪಿ, ತಡಹಾಳ, ಅರೇಕುರಹಟ್ಟಿ, ಅಮರಗೋಳ, ಉಮಚಗಿ, ಇಂಗಳಹಳ್ಳಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ನೀರು ಪೂರೈಕೆ ಮಾಡಿ ಸಮಸ್ಯೆ ಪರಿಹರಿಸಬೇಕು’ ಎಂದರು.

‘ನವಲಗುಂದ ಅಣ್ಣಿಗೇರಿ ಪಟ್ಟಣ ಸೇರಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಕೆರೆಗಳಿಗೆ ಮಲಪ್ರಭಾ ಕಾಲುವೆ ನೀರನ್ನು ತುಂಬಿಸಲು ಆಯಾ ಭಾಗದ ಅಧಿಕಾರಿಗಳು ಕ್ರಮ ವಹಿಸಬೇಕು. ಬೇಸಿಗೆ ಇರುವುದರಿಂದ ನೀರಿನ ಅಭಾವವಾಗದಂತೆ ಕೂಡಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ವಿದ್ಯುತ್ ಕಡಿತ ಹೆಚ್ಚುತ್ತಿರುವುದಕ್ಕೆ ಅವರು ಹೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹುಬ್ಬಳ್ಳಿ ತಾಲ್ಲೂಕು ಬ್ಯಾಹಟ್ಟಿ ಗ್ರಾಮದಲ್ಲಿ ಈಚೆಗೆ ಸುರಿದ ಗುಡುಗು ಮಿಂಚು ಸಹಿತ ಭಾರಿ ಮಳೆಗೆ ಸಿದ್ದಪ್ಪ ಚನ್ನಪ್ಪ ಚವಲಗಿ ಅವರ 32 ಕುರಿಗಳು ಸಾವನ್ನಪ್ಪಿದ್ದು, ₹1.20 ಲಕ್ಷ ಪರಿಹಾರ ನೀಡುವಂತೆ ಸೂಚಿಸಿದರು.

ತಹಶೀಲ್ದಾರ್ಗಳಾದ ಸುಧೀರ ಸಾಹುಕಾರ, ಮಂಜುನಾಥ ದಾಸಪ್ಪನವರ, ಜೆ.ಬಿ. ಮಜ್ಜಗಿ, ತಾಲ್ಲೂಕು ಪಂಚಾಯಿತಿ ಇಒ ರವೀಂದ್ರಗೌಡ ಪಾಟೀಲ, ಆರ್.ಎಂ. ಹೊಸಮನಿ, ಸಿಪಿಐ ರವಿ ಕಪ್ಪತ್ತನವರ, ಗ್ಯಾರಂಟಿ ಸಮಿತಿ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ, ಶಿವಾನಂದ ಭೂಮಣ್ಣವರ, ಡಿಡಿಪಿಐ ಉಮೇಶ ಬೊಮ್ಮಕ್ಕನವರ, ಸೋಮನಗೌಡ ಪಾಟೀಲ, ರಾಘವೇಂದ್ರ ಜಾಲಗಾರ, ಮನೋಹರ ದ್ಯಾಬೇರಿ, ಗಾಯತ್ರಿ ಪಾಟೀಲ, ಡಾ.ಎನ್ ಬಿ ಕಾಲವಾಡ, ಎಸ್.ಎಸ್. ಲಂಗೂಟಿ, ಎಸ್.ಪಿ. ಪೂಜಾರ, ವೈ.ಜಿ. ಗದ್ದಿಗೌಡರ, ಅಬೀದಾ ಮುಲ್ಲಾನವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-24-883207501

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.