ನವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದಲ್ಲಿ ಗುರುವಾರ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.

ನರಗುಂದ ಪುಣ್ಯಾರಣ್ಯ ಪತ್ರಿವನಮಠದ ಗುರು ಸಿದ್ಧವೀರ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಧು–ವರರನ್ನು ಆಶೀರ್ವದಿಸಿದರು.

ಬೇರೆ ಬೇರೆ ಊರುಗಳಿಂದ ಆಗಮಿಸಿದ ಪಲ್ಲಕ್ಕಿ ಹಾಗೂ ಡೊಳ್ಳಿನ ವಾದ್ಯಗಳೊಂದಿಗೆ ಬೀರಲಿಂಗೇಶ್ವರ ಪಲ್ಲಕ್ಕಿ ಉತ್ಸವವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ರಾತ್ರಿ, ವಿಜಯಪುರ ಜಿಲ್ಲೆಯ ನಿಂಬರಗಿ ಬೀರಲಿಂಗೇಶ್ವರ ಡೊಳ್ಳಿನ ಗಾಯನ ಸಂಘದ ಲಕ್ಷ್ಮೀ ನಿಂಬರಗಿ ಹಾಗೂ ಚಿಕ್ಕೋಡಿ ತಾಲ್ಲೂಕಿನ ಕಬ್ಬೂರದ ಅಮೋಘ ಸಿದ್ದೇಶ್ವರ ಗಾಯನ ಸಂಘದ ಶಾಂತಾ ಕಬ್ಬೂರ ಅವರಿಂದ ಡೊಳ್ಳಿನ ಪದಗಳ ಗಾಯನ ಜರುಗಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-24-2042738773

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.