ನವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮವು ಏ.30ರಂದು ಜರುಗಲಿದೆ.

ಬೆಳಿಗ್ಗೆ 6 ಗಂಟೆಗೆ ಬೀರಲಿಂಗೇಶ್ವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ಹಾಗೂ ಸಿದ್ಧವೀರ ಶಿವಯೋಗಿ ಶಿವಾಚಾರ್ಯರಿಂದ ಅಮೃತವಾಣಿ ಕಾರ್ಯಕ್ರಮ ನಡೆಯಲಿದೆ. ನರಗುಂದ ಪುಣ್ಯಾರಣ್ಯ ಪತ್ರಿವನಮಠದ ಗುರು ಸಿದ್ಧವೀರ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಕುಸುಗಲ್ಲ ಸಿದ್ದಾರೂಢ ಮಠದ ಸಿದ್ದಯ್ಯ ಸ್ವಾಮೀಜಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡುವರು. ಶಾಸಕ ಎನ್.ಎಚ್. ಕೋನರಡ್ಡಿ, ಮಾಜಿ ಶಾಸಕರಾದ ಕೆ.ಎನ್. ಗಡ್ಡಿ, ಶಂಕರ ಪಾಟೀಲ ಮುನೇನಕೊಪ್ಪ, ಕೆಪಿಸಿಸಿ ಸದಸ್ಯ ವಿನೋದ ಅಸೂಟಿ ವಿಶೇಷ ಪಾಲ್ಗೊಳ್ಳುವರು.

ಬೆಳಿಗ್ಗೆ 9.35ಕ್ಕೆ ಬೀರಲಿಂಗೇಶ್ವರ ಕೈಲಾಸ ಮಂಟಪದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ. ವಿವಿಧ ಊರುಗಳಿಂದ ಆಗಮಿಸಿದ ಪಲ್ಲಕ್ಕಿ ಹಾಗೂ ಡೊಳ್ಳಿನ ವಾದ್ಯಗಳೊಂದಿಗೆ ಬೀರಲಿಂಗೇಶ್ವರ ಪಲ್ಲಕ್ಕಿ ಉತ್ಸವವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿಲಿದೆ.

ರಾತ್ರಿ 9.30ಕ್ಕೆ ಲಕ್ಷ್ಮೀ ನಿಂಬರಗಿ ಹಾಗೂ ಶಾಂತಾ ಕಬ್ಬೂರ ಅವರಿಂದ ಡೊಳ್ಳಿನ ಪದಗಳ ಗಾಯನ ಹಮ್ಮಿಕೊಳ್ಳಲಾಗಿದೆ. ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-24-1874430105

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.