ನವಲಗುಂದ: ‘ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ ಅಧ್ಯಾತ್ಮ ಪ್ರವಚನದ ಮೂಲಕ ಭಕ್ತರಿಗೆ ಸನ್ಮಾರ್ಗದ ಸಂದೇಶ ನೀಡುತ್ತಿದ್ದಾರೆ’ ಎಂದು ಪಂಚಗ್ರಹ ಹಿರೇಮಠದ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಇಲ್ಲಿನ ಪಂಚಗ್ರಹ ಹಿರೇಮಠದ ಗುರುಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಪ್ರವಚನ ಕಾರ್ಯಕ್ರಮದಲ್ಲಿ ನಡೆದ ಅಭಿನವ ಮೃತ್ಯುಂಜಯ ಸ್ವಾಮೀಜಿಯವರ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.

ಗವಿಮಠದ ಬಸವಲಿಂಗ ಸ್ವಾಮೀಜಿ ಮಾತನಾಡಿ, ‘ಮಣಕವಾಡ ಶ್ರೀ ಪ್ರವಚನದ ಮೂಲಕ ಅಧ್ಯಾತ್ಮ ಜ್ಞಾನ ಪಸರಿಸುತ್ತಿದ್ದಾರೆ’ ಎಂದರು.

ಶಾಸಕ ಎನ್.ಎಚ್.ಕೋನರಡ್ಡಿ ಮಾತನಾಡಿದರು. ಪ್ರವಚನದ ಜತೆಗೆ ಪ್ರತಿ ದಿನ ಬೆಳಗಿನ ಜಾವ ಪಟ್ಟಣದಲ್ಲಿ ಸಂಚರಿಸಿ ಚಟ ಮುಕ್ತ ಹಾಗೂ ಸ್ವಚ್ಛತಾ ಅಭಿಯಾನ ನಡೆಸಲಾಗುತ್ತಿದೆ. ಪ್ರತಿ ದಿನ ಪ್ರವಚನ ಮುಕ್ತಾಯ ಸಂದರ್ಭದಲ್ಲಿ ಮಹಾ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

ಹಿರೇಮಠದ ನಿಯೋಜಿತ ಪಿಠಾಧಿಕಾರಿ ವೀರಬಸವ ದೇವರು, ಅಣ್ಣಪ್ಪ ಬಾಗಿ, ಸಿದ್ಧಲಿಂಗಯ್ಯ ಹಿರೇಮಠ, ಎಂ.ಡಿ.ಕುಲಕರ್ಣಿ, ಶ್ರೀಶೈಲ ಮೂಲಿಮನಿ, ಗಂಗಪ್ಪ ಹಳ್ಳದ, ಪಾಂಡಪ್ಪ ಕೋನರಡ್ಡಿ, ಮಲ್ಲಿಕಾರ್ಜುನ ಜಲಾದಿ, ಯಲ್ಲಪ್ಪ ಭೋವಿ, ಅಪ್ಪಣ್ಣ ಹಳ್ಳದ, ಬಸವರಾಜ ಈಟಿ, ಸಿದ್ದಲಿಂಗಪ್ಪ ಹಳ್ಳದ, ಎ.ಬಿ.ಕೊಪ್ಪದ, ಆರ್.ಎಸ್.ನೇಗಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-24-354463808

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.