ನವಲಗುಂದ: ವಿಧಾನಸಭಾ ಕ್ಷೇತ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೆಣ್ಣೆ ಹಳ್ಳ, ತುಪ್ಪರಿ ಹಳ್ಳಗಳು ತುಂಬಿ ಹರಿದು ಪ್ರವಾಹ ಉಂಟಾಗಿ ರೈತರು ಹಾಗೂ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಸರ್ಕಾರ ತಕ್ಷಣ ಸಂಕಷ್ಟದಲ್ಲಿರುವವರಿಗೆ ನೆರವಾಗಬೇಕು ಎಂದು ಬಿಜೆಪಿ ನವಲಗುಂದ ಮಂಡಲದಿಂದ ಶಿರಸ್ತೇದಾರ ಕೃಷ್ಣ ಅರೇರ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ಗಂಗಪ್ಪ ಮನಮಿ ಮಾತನಾಡಿ, ತಾಲ್ಲೂಕಿನಲ್ಲಿ ಈಗಾಗಲೇ ಬಹುತೇಕ ರೈತರು ಬಿತ್ತನೆ ಮಾಡಿ, ಬೀಜ, ಗೊಬ್ಬರಕ್ಕೆ ಸಾಕಷ್ಟು ವೆಚ್ಚ ಮಾಡಿದ್ದರು. ಮಳೆಯಿಂದಾಗಿ ಮೊಳಕೆಯೊಡೆಯುವ ಹಂತದಲ್ಲೇ ಬೆಳೆ ಹಾಳಾಗಿದೆ. ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದೇವರಾಜ ದಾಡಿಬಾಯಿ ಮಾತನಾಡಿ, ಮನೆ ಬಿದ್ದರೆ ಬಿಜೆಪಿ ಸರ್ಕಾರ ಇದ್ದಾಗ ಎ.ಬಿ.ಸಿ ಮಾದರಿಯಲ್ಲಿ ₹50 ಸಾವಿರ, ₹3 ಲಕ್ಷ ಹಾಗೂ ₹5 ಲಕ್ಷ ಪರಿಹಾರ ನೀಡಲಾಗುತ್ತಿತ್ತು. ಈಗ ಅದೇ ಮಾದರಿಯಲ್ಲಿ ಸರ್ಕಾರ ಪರಿಹಾರ ನೀಡಬೇಕು. ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ. ಜಾನುವಾರಗಳು ಸಾವನ್ನಪ್ಪಿವೆ. ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು’ ಎಂದು ಆಗ್ರಹಿಸಿದರು.

ರೈತ ಮುಖಂಡ ಷಣ್ಮುಖ ಗುರಿಕಾರ ಮಾತನಾಡಿ, ಮಳೆ ಹಾನಿ ಕುರಿತು ಅಧಿಕಾರಿಗಳು ಕಾಟಾಚಾರಕ್ಕೆ ಸಮೀಕ್ಷೆ ಮಾಡದೆ, ನೈಜ ವರದಿಯನ್ನು ಸರ್ಕಾರಕ್ಕೆ ಕಳಿಸಿ ರೈತರಿಗೆ ನ್ಯಾಯ ಕೊಡಿಸಬೆಕು ಎಂದು ಹೇಳಿದರು.

ಸಾಯಿಬಾಬಾ ಆನೆಗುಂದಿ, ಸುರೇಶ ಗಾಣಿಗೇರ, ಸಿದ್ದಣ್ಣ ಕಿಟಗೇರಿ, ಎಸ್.ಎನ್.ಬಾಳನಗೌಡ್ರ, ಮಲ್ಲಿಕಾರ್ಜುನ ಸಂಗನಗೌಡರ, ಬಸುರಾಜ್ ಕಾತರಕಿ, ಜಯಪ್ರಕಾಶ ಬದಾಮಿ, ಪ್ರಕಾಶ್ ಪಾಟೀಲ, ನಾಗೇಶ್ ಬೆಂಡಿಗೇರಿ, ಫಕ್ಕಿರಪ್ಪ ಜಕ್ಕಪ್ಪನವರ, ಆನಂದ ಚವಡಿ, ಅರುಣ ಮೆಣಸಿನಕಾಯಿ, ಬಿ.ಎಲ್.ಪೂಜಾರ, ಪಾಲಾಕ್ಷಗೌಡ ಪಾಟೀಲ, ನಾಗಪ್ಪ ಹರ್ತಿ, ಮಲ್ಲನಗೌಡ ಹಿರೇಗೌಡರ, ಪ್ರವೀಣ ಪಾಟೀಲ, ದ್ಯಾಮನಗೌಡ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.