ನವಲಗುಂದ: ಗ್ರಾಮೀಣ ಭಾಗದಲ್ಲಿ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಹಾಗೂ ಶುದ್ಧ ನೀರು ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರು, ಮನರೇಗಾ ಕರ ವಸೂಲಾತಿ, ಸಾಮಾಜಿಕ ಲೆಕ್ಕ ಪರಿಶೋಧನೆ ಕುರಿತು ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಶುದ್ಧ ನೀರು ಪೂರೈಕೆಯಾಗುತ್ತಿರುವ ಕುರಿತು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಈ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳು ಮುನ್ನೆಚ್ಚರಿಕೆ ವಹಿಸಬೇಕು. ಮನರೇಗಾ ಯೋಜನೆಯಲ್ಲಿ ಪ್ರಗತಿ ಸಾಧಿಸಬೇಕು’ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವೀಂದ್ರ ಪಾಟೀಲ, ತಾ.ಪಂ ಸಹಾಯಕ ನಿರ್ದೇಶಕ ಜಗದೀಶ ಹಡಪದ, ಸಿದ್ದು ಐರಾಣಿ, ಗುರುನಾಥ ಜೋಗಿ, ಆನಂದ ನಾವಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-24-1300757760

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.