ಶುದ್ಧೀಕರಣ ಘಟಕದಲ್ಲಿರುವ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲಾಗಿದೆ. ಲ್ಯಾಬ್ ಟೆಸ್ಟ್ ಮಾಡಿಸಲಾಗಿದ್ದು, ನೀರು ಕುಡಿಯಲು ಯೋಗ್ಯವಾಗಿದೆ ಎಂದು ವರದಿ ಬಂದಿದೆ, ಸದ್ಯ ಶುದ್ಧ ನೀರು ಪೂರೈಸಲಾಗುತ್ತಿದೆ
– ಮಮತಾಜ ಛಬ್ಬಿ, ಪಿಡಿಒ ಗ್ರಾಮ ಪಂಚಾಯಿತಿ ಶಲವಡಿ
ಮನೆ ಹಾಗೂ ಶಾಲೆಗಳಲ್ಲಿಯೂ ಕಲುಷಿತ ನೀರು ಪೂರೈಕೆಯಾಗುತ್ತಿದ್ದು, ಶುದ್ಧ ಕುಡಿಯುವ ನೀರು ಪೂರೈಸುವಂತೆ ಗ್ರಾಮ ಪಂಚಾಯಿತಿ ಪಿಡಿಒಗೆ ಪತ್ರ ಬರೆದರೂ ಇನ್ನು ಶುದ್ಧ ನೀರು ಪೂರೈಕೆಯಾಗುತ್ತಿಲ್ಲ