ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನವಲಗುಂದ | ‘ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ’

Published 12 ಜೂನ್ 2024, 14:40 IST
Last Updated 12 ಜೂನ್ 2024, 14:40 IST
ಅಕ್ಷರ ಗಾತ್ರ

ನವಲಗುಂದ: ‘ಬಾಲ ಕಾರ್ಮಿಕ ಪದ್ಧತಿಯು ವಿಶ್ವಕ್ಕೆ ಅಂಟಿದ ಶಾಪ. ಅದರ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು’ ಎಂದು ಶಂಕರ ಮಹಾವಿದ್ಯಾಲಯ ಪ್ರಾಚಾರ್ಯ ಎಸ್.ವಿ.ಬಡಿಗೇರ ಹೇಳಿದರು. 

ಶಂಕರ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ವಿಶ್ವ ಬಾಲಕಾರ್ಮಿಕರ ವಿರೋಧಿ ದಿನಾಚರಣೆ‘ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಲ ಕಾರ್ಮಿಕ ಪದ್ಧತಿ ಹೋಗಲಾಡಿಸಲು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು’ ಎಂದರು.

ಎನ್‌ಎಸ್‌ಎಸ್‌ ಅಧಿಕಾರಿ ಎಂ.ಎನ್. ಹಾರೋಗೇರಿ ಪ್ರಾಸ್ತಾವಿಕವಾಗಿ ಮಾತನಾಡಿ,  ‘6 ರಿಂದ 14 ವರ್ಷದೊಳಗಿನ ಎಲ್ಲ ಮಕ್ಕಳು ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯುವುದು ಅವರ ಹಕ್ಕು. ಇದನ್ನು ಎಲ್ಲಾ ಪೋಷಕರು ಪಾಲಿಸಬೇಕು ಎಂದು ಸರ್ಕಾರ ಸೂಚಿಸಿದೆ. ಆದರೂ ಸಮಾಜದ ಕೆಲವೆಡೆ ಬಾಲ ಕಾರ್ಮಿಕ ಪದ್ಧತಿ ಇದೆ. ಇದು ನಿರ್ಮೂಲನೆಯಾಗಬೇಕು’ ಎಂದರು. 

ಮಹಾವಿದ್ಯಾಲಯದ ಪ್ರಾಧ್ಯಾಪಕರಾದ  ಶೀಲಾ ತುಬುಚಿ, ಆರ್.ಪಿ. ಚವ್ವಾಣ, ಎನ್‌ಎಸ್‌ಎಸ್‌ ಸ್ವಯಂ ಸೇವಕರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT