ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನೀಟ್ ಪರೀಕ್ಷೆ ಅಕ್ರಮ: ನ್ಯಾಯಾಂಗ ತನಿಖೆಗೆ ಎಐಡಿಎಸ್ಓ ಆಗ್ರಹ

Published 4 ಜುಲೈ 2024, 15:24 IST
Last Updated 4 ಜುಲೈ 2024, 15:24 IST
ಅಕ್ಷರ ಗಾತ್ರ

ಧಾರವಾಡ: ಎನ್‌ಇಇಟಿ ಹಾಗೂ ಎನ್‌ಇಟಿನಲ್ಲಿ ಅಕ್ರಮ ನಡೆದಿವೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಪಡಿಸಬೇಕು, ರಾಜ್ಯಮಟ್ಟದಲ್ಲಿಯೇ ವೈದ್ಯಕೀಯವಿಜ್ಞಾನ ಕೋರ್ಸ್‌ ಪ್ರವೇಶ ಪರೀಕ್ಷೆ ನಡೆಸಬೇಕು ಎಂದು ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್ ಆರ್ಗನೈಸೇಷನ್‌ (ಎಐಡಿಎಸ್ಓ) ಜಿಲ್ಲಾ ಘಟಕದವರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ನೀಟ್ ಮತ್ತು ನೆಟ್ ಅಕ್ರಮ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು. ಪ್ರಕರಣವು ತಾರ್ಕಿಕ ಅಂತ್ಯ ತಲುಪುವವರೆಗೂ ನೀಟ್ ಕೌನ್ಸೆಲಿಂಗ್ ತಡೆ ಹಿಡಿಯಬೇಕು. ನೆಟ್ ಮರುಪರೀಕ್ಷೆಯ ದಿನಾಂಕವನ್ನು ಕೂಡಲೇ ಪ್ರಕಟಿಸಬೇಕು. ಯುಜಿಸಿಯೇ ಪರೀಕ್ಷೆಯನ್ನು ನಡೆಸಬೇಕು ಎಂದು ಆಗ್ರಹಿಸಿದರು.

ಎಐಡಿಎಸ್‌ಒ ಮುಖಂಡ ರವಿಕಿರಣ್ ಜೆ.ಪಿ, ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ, ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ಸಿಂಧೂ ಕೌದಿ, ಕಚೇರಿ ಕಾರ್ಯದರ್ಶಿ ಸ್ಫೂರ್ತಿ ಚಿಕ್ಕಮಠ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT