ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ:ನೇಹಾ ಹತ್ಯೆ ಖಂಡಿಸಿ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ BJP ಪ್ರತಿಭಟನೆ

Published 22 ಏಪ್ರಿಲ್ 2024, 7:06 IST
Last Updated 22 ಏಪ್ರಿಲ್ 2024, 7:06 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಹುಧಾ ಮಹಾನಗರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸೋಮವಾರ ಹಳೇ ಹುಬ್ಬಳ್ಳಿ ಇಂಡಿಪಂಪ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೊಲೆ ಆರೋಪಿ ಫಯಾಜ್'ಗೆ ಗಲ್ಲುಶಿಕ್ಷೆ ವಿಧಿಸಲೇಬೇಕು ಎಂದು ಆಗ್ರಹಿಸಿದರು. ಕೊಲೆಗಡುಕರಿಗೆ ರಕ್ಷಣೆ ನೀಡಲು ಮುಂದಾಗುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ವೃತ್ತದ ಮಧ್ಯ ಧರಣಿ ಕುಳಿತು, ನ್ಯಾಯಕ್ಕಾಗಿ ಆಗ್ರಹಿಸಿ, ಟಾಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

'ನೇಹಾ ಕೊಲೆ ಖಂಡಿಸಿ ರಾಜ್ಯದಾದ್ಯಂತ ಇಂದು‌ ಬಿಜೆಪಿ, ಎಲ್ಲ ಹಿಂದೂ ಸಂಘಟನೆಗಳ‌ ಜೊತೆ ಸೇರಿ ಪ್ರತಿಭಟನೆ ನಡೆಸುತ್ತಿದೆ. ಲವ್ ಜಿಹಾದ್, ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನಾವು ಹೋರಾಟ ಆರಂಭಿಸಿದ್ದೇವೆ' ಎಂದು ಶಾಸಕ ಮಹೇಶ ಟೆಂಗಿಕಾಯಿ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ ಅವರ ಹೇಳಿಕೆ ಗಮನಿಸಿದರೆ, ಪ್ರಕರಣ ದಿಕ್ಕು ತಪ್ಪುವ ಸಾಧ್ಯತೆ ಕಂಡು ಬರುತ್ತಿದೆ. ನೇಹಾ ಅವರ ತಂದೆ ನಿರಂಜನಯ್ಯ ಹಿರೇಮಠ ಅವರು ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಬಳಿಯೂ ಇದೇ ಸಂಶಯ ವ್ಯಕ್ತಪಡಿಸಿದ್ದಾರೆ. ರಾಜ್ಯ ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವಿಲ್ಲ. ಆ ಕಾರಣದಿಂದ ರಾಜ್ಯ ಸರ್ಕಾರ ತಕ್ಷಣ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು' ಎಂದು ಆಗ್ರಹಿಸಿದರು.

'ಬಿಜೆಪಿ ಯಾವ ಜನಾಂಗಕ್ಕೂ ಹಿಂಸೆ ನೀಡಿಲ್ಲ.‌ ಆದರೆ, ಸಮಾಜ ಘಾತುಕ ಶಕ್ತಿಯನ್ನು ಎಂದಿಗೂ ಸುಮ್ಮನೆ ಬಿಡುವುದಿಲ್ಲ. ಮುಖ್ಯಮಂತ್ರಿ ಅವರೇ ಹಿಂದೂಗಳನ್ನು ಹಿಂಸಿಸುತ್ತಿದ್ದಾರೆ, ಬೇರೆ ಕೋಮಿನವರು ಕೊಲೆಯಾಗಿದ್ದರೆ ಮನೆಗೆ ತೆರಳಿ ಸಾಂತ್ವನ ಹೇಳುತ್ತಿದ್ದರು. ಹಿಂದೂ ಹುಡುಗಿ ಕೊಲೆಯಾಗಿದ್ದಕ್ಕೆ ಅವರು ಬಂದಿಲ್ಲ' ಎಂದು ಆರೋಪಿಸಿದರು.

ಶಿವು ಮೆಣಸಿನಕಾಯಿ, ನಾರಾಯಣ ಜರತಾರಘರ, ಪ್ರಭು ನವಲಗುಂದಮಠ, ಅನೂಪ್ ಬಿಜವಾಡ, ರಾಧಾಬಾಯಿ ಸಫಾರೆ, ರಾಜುಬಜರತಾಘರ, ಜಗದೀಶ ಬುಲ್ಲಣ್ಣವರ, ಜಗದೀಶ ಗಾಳಗೆ, ದೀಪಕ ಲಾಳಗೆ, ಸವಿತಾ ಚವ್ಹಾಣ, ಲಕ್ಷ್ಮಿಕಾಂತ ಗೋಡಕೆ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT