ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿಯ ಜಾಮೀನು ಅರ್ಜಿ ಕುರಿತು ಸೋಮವಾರ ವಿಚಾರಣೆ ನಡೆಸಿದ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು, ಆಗಸ್ಟ್ 4ಕ್ಕೆ ಆದೇಶವನ್ನು ಕಾಯ್ದಿರಿಸಿದೆ.

ಕೊಲೆ ಪ್ರಕರಣದ ಆರೋಪಿ ಫಯಾಜ್ಗೆ ಜಾಮೀನು ನೀಡುವಂತೆ ಕಳೆದ ವಾರ, ಆರೋಪಿ ಪರ ವಕೀಲರು ವಾದ ಮಂಡಿಸಿದ್ದರು. ದೂರುದಾರರ ಪರ ವಾದ ಮಂಡಿಸಿದ ರಾಘವೇಂದ್ರ ಮುತಗೀಕರ, ಕೆಲವು ಉದಾಹರಣೆಗಳನ್ನು ಮುಂದಿಟ್ಟು ಆರೋಪಿಗೆ ಜಾಮೀನು ನೀಡದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ವಾದ–ವಿವಾದ ಆಲಿಸಿದ ಕೋರ್ಟ್, ಆದೇಶವನ್ನು ಆಗಸ್ಟ್ 4ಕ್ಕೆ ಕಾಯ್ದಿರಿಸಿದೆ ಎಂದು ಮೃತ ನೇಹಾ ಹಿರೇಮಠ ಅವರ ತಂದೆ ನಿರಂಜನಯ್ಯ ಹಿರೇಮಠ ತಿಳಿಸಿದ್ದಾರೆ.
.ನೇಹಾ ಕೊಲೆ ಪ್ರಕರಣ | ಫಯಾಜ್ ಸಿಐಡಿ ವಶಕ್ಕೆ; ತನಿಖೆ ಚುರುಕು.ನೇಹಾ ಕೊಲೆ ಪ್ರಕರಣ: ಆರೋಪಿ ಫಯಾಜ್ನನ್ನು ಹುಬ್ಬಳ್ಳಿಗೆ ಕರೆದೊಯ್ದ CID ಪೊಲೀಸರು .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.