ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Neha Murder Case | ಸಿಐಡಿ ತನಿಖೆ: ಸ್ಥಳ ಮಹಜರು ವೇಳೆ ಎಬಿವಿಪಿ ಪ್ರತಿಭಟನೆ

Published 24 ಏಪ್ರಿಲ್ 2024, 11:35 IST
Last Updated 24 ಏಪ್ರಿಲ್ 2024, 11:35 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಸ್ಥಳ ಮಹಜರು ಮಾಡಲು ಸಿಐಡಿ ಅಧಿಕಾರಿಗಳು ಬಿವಿಬಿ ಕಾಲೇಜಿಗೆ ಕರೆದೊಯ್ಯುವಾಗ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಫಯಾಜ್‌ನನ್ನು ಕರೆದುಕೊಂಡು ಬಂದ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ, ಪೊಲೀಸರು ಕಾರ್ಯಕರ್ತರನ್ನು ತಡೆದರು‌. ಆ ವೇಳೆ ಪರಸ್ಪರ ವಾಗ್ವಾದ ನಡೆಯಿತು.

'ನಮ್ಮ ಕಾಲೇಜಿನ ಆವರಣದಲ್ಲಿ ಕೊಲೆ ನಡೆದಿದೆ. ಆರೋಪಿಗೆ ಶಿಕ್ಷೆಯಾಗಬೇಕು. ಪ್ರಕರಣದ ತನಿಖೆ ಸಿಬಿಐಗೆ ಒಪ್ಪಿಸಬೇಕು. ಇಲ್ಲದಿದ್ದರೆ, ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ' ಎಂದು ಕಾರ್ಯಕರ್ತರು ಆಗ್ರಹಿಸಿದರು.

ಕಾವ್ಯಾ, ಮೌನೇಶ ಗೌಡ, ರಾಘವೇಂದ್ರ ಪೆದ್ದಾರ, ಶಶಿ, ಸುಪ್ರಿತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT