ಹುಬ್ಬಳ್ಳಿ: ನನ್ನ ತಮ್ಮ ಇಂದಲ್ಲ ನಾಳೆ, ಕರ್ನಾಟಕದ ಮುಖ್ಯಮಂತ್ರಿ ಆಗುತ್ತಾನೆ ಎಂಬ ನಂಬಿಕೆ ಇತ್ತು. ಅದರಂತೆ, ಇಂದು ಸಿ.ಎಂ ಆಗಿ ಆಯ್ಕೆಯಾಗಿದ್ದಾನೆ ಎಂದು ಬಸವರಾಜ ಬೊಮ್ಮಾಯಿ ಅವರ ಅಕ್ಕ ಉಮಾ ಪಾಟೀಲ ಅವರು ಸಂತಸ ವ್ಯಕ್ತಪಡಿಸಿದರು.

ಸಿ.ಎಂ ಸ್ಥಾನಕ್ಕಾಗಿ ತಮ್ಮ ಕಟ್ಟಿದ್ದ ಪರೀಕ್ಷೆಯ ಫಲಿತಾಂಶ ಇಂದು ಬಂದಿದೆ. ಬಸವರಾಜ ರಾಜಕೀಯಕ್ಕೆ ಬರುವುದು ತಂದೆ ಎಸ್.ಆರ್. ಬೊಮ್ಮಾಯಿ ಅವರಿಗೆ ಆರಂಭದಲ್ಲಿ ಇಷ್ಟವಿರಲಿಲ್ಲ. ಅನಿವಾರ್ಯವಾಗಿ ರಾಜಕೀಯಕ್ಕೆ ಬಂದ ಬಸವರಾಜ, ವಿಧಾನ ಪರಿಷತ್ ಸದಸ್ಯರಾಗಿ, ಶಾಸಕರಾಗಿ ಹಾಗೂ ಸಚಿವರಾಗಿ ಹಂತಹಂತವಾಗಿ ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾನೆ. ಮುಂದೊಮ್ಮಡ ಆತ ಪ್ರಧಾನಿಯೂ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಬಸವರಾಜ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಘೋಷಣೆಯಾದ ಹಿನ್ನೆಲೆಯಲ್ಲಿ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಂಗಳವಾರ ರಾತ್ರಿ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು

ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನಾಳೆ ಬೆಳಿಗ್ಗೆಯೇ ಪ್ರಮಾಣ ವಚನ | Prajavani

ಬೊಮ್ಮಾಯಿ ಆಯ್ಕೆ ಸಂತಸ ತಂದಿದೆ: ಚನ್ನು ಪಾಟೀಲ

ಹುಬ್ಬಳ್ಳಿ: ಬಸವರಾಜ ಬೊಮ್ಮಾಯಿ ಅವರ ಆಯ್ಕೆ ನಮ್ಮೆಲರಿಗೂ ಸಂತಸ ತಂದಿದೆ. ಇದಕ್ಕೆ ಕಾರಣಕರ್ತರಾದ ಎಲ್ಲಾ ನಾಯಕರಿಗೆ ಹಾಗೂ ಶಿಗ್ಗಾವಿ ಕ್ಷೇತ್ರದ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ" ಎಂದು ಬೊಮ್ಮಾಯಿ ಅವರ ಆಪ್ತ ಸಹಾಯಕರಾದ ಚನ್ನು ಪಾಟೀಲ ಅವರು ಹೇಳಿದರು.

LIVE| ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ | Prajavani

ಬಸವರಾಜ ಅವರ ತಂದೆ ಎಸ್. ಆರ್. ಬೊಮ್ಮಾಯಿ ಅವರ ಕಾಲದಿಂದಲೂ ನಾನು ಅವರೊಂದಿಗೆ ಕೆಲಸ ಮಾಡುತ್ತಿದ್ದೇನೆ. ಚಿಕ್ಕ ವಯಸ್ಸಿನಲ್ಲಿ ದೊಡ್ಡ ಸ್ಥಾನ ಸಿಕ್ಕಿದ್ದು, ಉತ್ತಮ ಕೆಲಸಗಳನ್ನು ಮಾಡಿ ಛಾಪು ಮೂಡಿಸಲಿದ್ದಾರೆ ಎಂದರು.

ಇದನ್ನೂ ಓದಿ: ಬಸವರಾಜ ಬೊಮ್ಮಾಯಿ ರಾಜಕೀಯ ಯಾನ: ಇಲ್ಲಿದೆ ಸಂಪೂರ್ಣ ವಿವರ | Prajavani

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.