ಹುಬ್ಬಳ್ಳಿ: ‘ಸಾರ್ವಜನಿಕರ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆಗಳಿಗೆ ಪರಿಹಾರ ನೀಡಲು ಸುಸಜ್ಜಿತ ಕಚೇರಿ ಆರಂಭಿಸಲಾಗಿದೆ. ಸಾರ್ವಜನಿಕರು ಸದುಪಯೋಗ ಪಡೆಯಬೇಕು’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಮಹಾನಗರ ಪಾಲಿಕೆ ಆವರಣದಲ್ಲಿ ಆಯುಕ್ತರ ಕಚೇರಿ ಹಿಂಭಾಗದಲ್ಲಿ ಅಂದಾಜು ₹ 1 ಕೋಟಿ ಅನುದಾನದಲ್ಲಿ ನಿರ್ಮಾಣ ಮಾಡಲಾದ ನೂತನ ಸಾರ್ವಜನಿಕ ಸಂಪರ್ಕ ಕಚೇರಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಟ್ಟಡ ಉದ್ಘಾಟಿಸಿದ ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಮಾತನಾಡಿದರು. ಮೇಯರ್ ರಾಮಪ್ಪ ಬಡಿಗೇರ, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಅಲ್ತಾಫ್ ಹಳ್ಳೂರ, ಅನಿಲಕುಮಾರ್ ಪಾಟೀಲ ಇತರರು ಪಾಳ್ಗೊಂಡಿದ್ದರು.