ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಕಾವೇರಿ: ಮಧ್ಯಸ್ಥಿಕೆ ವಹಿಸಲು ಕೇಂದ್ರಕ್ಕೆ ಸಾಧ್ಯವಾಗದು‘

Published 23 ಸೆಪ್ಟೆಂಬರ್ 2023, 4:29 IST
Last Updated 23 ಸೆಪ್ಟೆಂಬರ್ 2023, 4:29 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಥವಾ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವ ಪ್ರಶ್ನೆಯೇ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದರು. ‘ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಆರಂಭದಿಂದಲೇ ತಪ್ಪು ಹೆಜ್ಜೆ ಇಟ್ಟಿದೆ. ಇಷ್ಟರ ನಡುವೆಯೂ ನಾವು ಸಾಧ್ಯವಾದಷ್ಟು ಸಹಕಾರವನ್ನು  ರಾಜ್ಯ ಸರ್ಕಾರಕ್ಕೆ ಕೊಡುತ್ತಿದ್ದೇವೆ’ ಎಂದರು.

‘ತಮಿಳುನಾಡು ಮತ್ತು ಕರ್ನಾಟಕದ ಮುಖ್ಯಮಂತ್ರಿ ಅವರು ಒಂದೆಡೆ ಕುಳಿತು ಚರ್ಚೆ ಮಾಡಬೇಕು. ರಾಜ್ಯದ ಎಲ್ಲ ಸಂಸದರು ಮತ್ತು ರಾಜ್ಯಸಭಾ ಸದಸ್ಯರು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದ್ದೇವೆ. ಮುಂದೆಯೂ ರಾಜ್ಯ ಸರ್ಕಾರದ ಜೊತೆಗೆ ಇರಲಿದ್ದೇವೆ’ ಎಂದರು.

‘ಸದ್ಯದ ನೀರಿನ ಪರಿಸ್ಥಿತಿಯ ಕುರಿತು ಸಮಗ್ರ ಅಧ್ಯಯನಕ್ಕಾಗಿ ಅಧಿಕಾರಿಗಳ ತಂಡವನ್ನು ಕಳುಹಿಸಿ ಕೊಡುವಂತೆ ಕೇಳಿದ್ದಾರೆ. ಅದನ್ನು ಕೇಂದ್ರ ಜಲಶಕ್ತಿ ಸಚಿವರಿಗೆ ಮನವರಿಕೆ ಮಾಡಿದ್ದೇವೆ. ಮತ್ತೊಮ್ಮೆ ಸದ್ಯದ ನೀರಿನ ಸಂಗ್ರಹದ ಅಧ್ಯಯನ ಮಾಡಲು ಹೇಳಿದ್ದೇವೆ. ಅದಕ್ಕೆ ಕೇಂದ್ರ ಸಚಿವರು ಸಹ ಒಪ್ಪಿಕೊಂಡಿದ್ದಾರೆ. ಕಾವೇರಿ ಸೇರಿದಂತೆ ಯಾವುದೇ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗಬಾರದು. ಈ ನಿಟ್ಟಿನಲ್ಲಿ ಸರ್ವ ರೀತಿಯ ಸಹಕಾರವನ್ನು ರಾಜ್ಯ ಸರ್ಕಾರಕ್ಕೆ ಕೊಟ್ಟಿದ್ದೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT