ಭಾನುವಾರ, ಜೂನ್ 20, 2021
29 °C

ಎರಡು ತಿಂಗಳಲ್ಲಿ ಕಾಮಗಾರಿ ಮುಗಿಸಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಗೋಕುಲ ಕೈಗಾರಿಕಾ ಪ್ರದೇಶದಲ್ಲಿ ನಡೆಯುತ್ತಿರುವ ಒಳಚರಂಡಿ, ಸಿ.ಸಿ ರಸ್ತೆ ನಿರ್ಮಾಣ ಮತ್ತು ಪೈಪ್‌ ಲೈನ್‌ ಅಳವಡಿಕೆ ಕಾರ್ಯವನ್ನು ಎರಡು ತಿಂಗಳಲ್ಲಿ ಮುಗಿಸಬೇಕು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಸೂಚಿಸಿದರು.

ಅವರು ಭಾನುವಾರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿ ‘ಕೈಗಾರಿಕಾ ಪ್ರದೇಶದಲ್ಲಿ ರಸ್ತೆ ಸೇರಿದಂತೆ ಇತರೆ ಮೂಲ ಸೌಕರ್ಯಗಳ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 2.37 ಕಿ.ಮೀ.ಗೆ ₹20 ಕೋಟಿ‌ ಹಾಗೂ ಎರಡನೇ ಹಂತದಲ್ಲಿ 2.7 ಕಿ.ಮೀ.ಗೆ‌ ₹21 ಕೋಟಿ ಬಿಡುಗಡೆ ಮಾಡಲಾಗಿದೆ. ಮೊದಲ ಹಂತದ ಕಾಮಗಾರಿಯಲ್ಲಿ 900 ಮೀಟರ್‌ ಮತ್ತು ಎರಡನೇ ಹಂತದಲ್ಲಿ 950 ಮೀಟರ್‌ ಕಾರ್ಯ ಪೂರ್ಣಗೊಂಡಿದೆ’ ಎಂದರು.

‘ಹೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸಿ ನೆಲಮಟ್ಟದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಕೈಗೊಳ್ಳಬೇಕು. ಎರಡು ತಿಂಗಳಲ್ಲಿ ಕಾರ್ಯ ಮುಗಿಸಬೇಕು’ ಎಂದು ಅಧಿಕಾರಿಗಳಿಗೆ ಹೇಳಿದರು. ಬಳಿಕ ಹನುಮಂತ ನಗರದಲ್ಲಿ ರಾಜಕಾಲುವೆಗೆ ನಿರ್ಮಿಸಲಾಗುತ್ತಿರುವ ಸೇತುವೆ ಕಾಮಗಾರಿ ಪರಿಶೀಲಿಸಿದರು.

ಭೂಮಿಪೂಜೆ: ನಗರದ 42ನೇ ವಾರ್ಡ್‌ ವ್ಯಾಪ್ತಿಯ ರಾಮನಗರದಲ್ಲಿ ಒಳಚರಂಡಿ ಹಾಗೂ ಸಿ.ಸಿ. ರಸ್ತೆ ಕಾಮಗಾರಿಗೆ ಶೆಟ್ಟರ್‌ ಚಾಲನೆ ನೀಡಿದರು.

ಹೂಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಪಾಲಿಕೆ ಮಾಜಿ ಸದಸ್ಯ ಮಹೇಶ್ ಬುರ್ಲಿ, ಮುಖಂಡರಾದ ಮಲ್ಲಿಕಾರ್ಜುನ ಸಾವುಕಾರ, ಸಂತೋಷ ಚವ್ಹಾಣ, ಸ್ಮಾರ್ಟ್ ಸಿಟಿ‌ ಕಾರ್ಯನಿರ್ವಾಹಕ ಎಂಜಿನಿಯರ್‌ ಬಸವರಾಜ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು