ಹಸಿರು ಕರ್ನಾಟಕ ಯೋಜನೆ ಅನುಷ್ಠಾನಕ್ಕೆ ಸೂಚನೆ

7

ಹಸಿರು ಕರ್ನಾಟಕ ಯೋಜನೆ ಅನುಷ್ಠಾನಕ್ಕೆ ಸೂಚನೆ

Published:
Updated:
Deccan Herald

ಧಾರವಾಡ: ‘ಪ್ರಸಕ್ತ ಆಯವ್ಯಯದಲ್ಲಿ ಘೋಷಿಸಿರುವ ಹಸಿರು ಕರ್ನಾಟಕ ಯೋಜನೆಯನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಹಾಗೂ ಸಂಸ್ಥೆಗಳ ಮುಖ್ಯಸ್ಥರು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಎಂ.ದೀಪಾ ಸೂಚಿಸಿದರು.

ಹಸಿರು ಕರ್ನಾಟಕ ಯೋಜನೆಯನ್ನು ಇದೇ 15ರಿಂದ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಹಸಿರು ಕರ್ನಾಟಕ ಯೋಜನೆಗೆ ಅಗತ್ಯವಿರುವ ಸಸಿಗಳಿವೆ. ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳ ಮುಖ್ಯಸ್ಥರು ಮತ್ತು ವಿಶ್ವವಿದ್ಯಾಲಯ ಸೇರಿದಂತೆ ಉನ್ನತ ಸಂಸ್ಥೆಗಳು ತಮ್ಮ ಅಧೀನದಲ್ಲಿರುವ ಜಾಗ ಹಾಗೂ ಅಗತ್ಯವಿರುವ ಸಸಿಗಳ ಸಂಖ್ಯೆಯನ್ನು ಕೂಡಲೇ ಅರಣ್ಯ ಇಲಾಖೆಗೆ ಸಲ್ಲಿಸಬೇಕು’ ಎಂದು ಹೇಳಿದರು. 

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಖಾರಿ ಸ್ನೇಹಲ್‌ ರಾಯಮಾನೆ ಮಾತನಾಡಿ, ‘ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಸತಿ ನಿಲಯ ಹಾಗೂ ಶಾಲೆಗಳು ಮತ್ತು ಸ್ಥಳಾವಕಾಶ ಹೊಂದಿರುವ ಗ್ರಾಮ ಪಂಚಾಯ್ತಿ ಕಚೇರಿ ಆವರಣದಲ್ಲಿ ಸಸಿಗಳನ್ನು ನೆಡಲು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು. 

ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮಹೇಶ್‌ಕುಮಾರ್ ಮಾತನಾಡಿದರು. ಉಪವಿಭಾಗಾಧಿಕಾರಿ ಮಹ್ಮದ್ ಝುಬೇರ್.ಎನ್., ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಸಹಾಯಕ ಪೊಲೀಸ್ ಆಯುಕ್ತ ಎಂ.ಎನ್. ರುದ್ರಪ್ಪ, ಶಂಕರ ಕುಂಬಿ, ವಿಜಯಕುಮಾರ್ ಕಡಕಭಾವಿ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !