ಶುಕ್ರವಾರ, ಮಾರ್ಚ್ 31, 2023
22 °C
ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ವಿಶ್ವಾಸ

ಕೆಎಲ್‌ಇ ಸಂಸ್ಥೆಗಳ ಸಂಖ್ಯೆ 500ಕ್ಕೆ ತಲುಪಲಿದೆ: ಪ್ರಭಾಕರ ಕೋರೆ ವಿಶ್ವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ‘ಕೆಎಲ್‌ಇ ಸಂಸ್ಥೆಯು ಈಗ 300 ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದು, ಮುಂದಿನ 20 ವರ್ಷಗಳಲ್ಲಿ ಈ ಸಂಖ್ಯೆ 500ಕ್ಕೆ ತಲುಪಲಿದೆ’ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹೇಳಿದರು.

ವಿದ್ಯಾನಗರದಲ್ಲಿರುವ ಕೆಎಲ್‌ಇ ಸಂಸ್ಥೆಯ ಬಿ.ವಿ. ಭೂಮರಡ್ಡಿ ಎಂಜಿನಿ ಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಅಮೃತ ಮಹೋತ್ಸವದ ಅಂಗವಾಗಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ,
75 ವರ್ಷ ಪೂರ್ಣಗೊಳಿಸಿದ ತಮಗೆ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.  

‘ಸಂಸ್ಥೆಯಲ್ಲಿ 1.48 ಲಕ್ಷ ವಿದ್ಯಾರ್ಥಿಗಳು, 18 ಸಾವಿರ ಶಿಕ್ಷಕರಿದ್ದಾರೆ. ಶಿಕ್ಷಣ ಸಂಸ್ಥೆಯಲ್ಲಿ ಓದಿದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್‌ ಮುಖ್ಯಮಂತ್ರಿ ಹುದ್ದೆಗೇರಿದ್ದಾರೆ. ಲೇಖಕಿ ಸುಧಾ ನಾರಾಯಣಮೂರ್ತಿ ವಿಶ್ವಮಟ್ಟಕ್ಕೆ ಬೆಳೆದಿದ್ದಾರೆ. ಇಂತಹ ನೂರಾರು ಜನರು ದೇಶ–ವಿದೇಶಗಳಲ್ಲಿ ಹೆಸರು ಮಾಡಿದ್ದಾರೆ’ ಎಂದು ಪ್ರಶಂಸಿಸಿದರು. ಉದ್ಯಮಿ ವಿಜಯ ಸಂಕೇಶ್ವರ ಮಾತನಾಡಿ, ‘ಜಗತ್ತೇ ನಿಬ್ಬೆರಗಾಗಿ ನೋಡುವಂತೆ 300 ಶಿಕ್ಷಣ ಸಂಸ್ಥೆಗಳನ್ನು, ವೈದ್ಯಕೀಯ ಕಾಲೇಜು, ಕ್ಯಾನ್ಸರ್‌ ಆಸ್ಪತ್ರೆ, ಆಯುರ್ವೇದ ಕಾಲೇಜು
ಗಳನ್ನು ಕೋರೆ ಸ್ಥಾಪಿಸಿದ್ದಾರೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು