ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸುಗಮ ಸಂಚಾರಕ್ಕಾಗಿ ಆಟೊಗಳಿಗೆ ನಂಬರಿಂಗ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.
ಎಲ್ಲ ಆಟೊ ಚಾಲಕರು ತಮ್ಮ ಆಟೊಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಠಾಣೆಗೆ ಪೂರೈಸಿ ಸಂಚಾರ ಠಾಣೆಯಿಂದ ನೀಡುವ ನಂಬರ್ ಹಾಕಿಸಿಕೊಳ್ಳಬೇಕು ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ರಮನ್ ಗುಪ್ತಾ ತಿಳಿಸಿದ್ದಾರೆ.
ಅವಳಿ ನಗರದಲ್ಲಿ ಅನಧಿಕೃತವಾಗಿ ಆಟೊಗಳು ಸಂಚರಿಸದಂತೆ ನಿರ್ಬಂಧ ವಿಧಿಸಲು ಈ ವ್ಯವಸ್ಥೆ ಜಾರಿಗೆ ತರಲಾಗುತ್ತಿದ್ದು, ಒಂದು ವೇಳೆ ಆಟೊ ಚಾಲಕರು ನಂಬರ್ ಹಾಕಿಸಿಕೊಳ್ಳದೆ ಸಂಚರಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸಾರ್ವಜನಿಕರು ಸುರಕ್ಷತೆ ದೃಷ್ಟಿಯಿಂದ ಪೊಲೀಸ್ ಇಲಾಖೆಯಿಂದ ಹಾಕಿದ ನಂಬರ್ ಇರುವ ಆಟೊಗಳಲ್ಲೇ ಸಂಚರಿಸಬೇಕು. ಇದರಿಂದ ಅಪರಾಧ ಕೃತ್ಯಗಳು ಸಂಭವಿಸಿದರೆ ಪತ್ತೆಗೆ ಸಹಾಯವಾಗುತ್ತದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.