ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಓಣಂ: ಹುಬ್ಬಳ್ಳಿ-ಕೊಚುವೇಲಿ ನಡುವೆ ವಿಶೇಷ ರೈಲು

Published : 10 ಸೆಪ್ಟೆಂಬರ್ 2024, 15:47 IST
Last Updated : 10 ಸೆಪ್ಟೆಂಬರ್ 2024, 15:47 IST
ಫಾಲೋ ಮಾಡಿ
Comments

ಹುಬ್ಬಳ್ಳಿ: ಓಣಂ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸಲು ಹುಬ್ಬಳ್ಳಿ ಮತ್ತು ಕೇರಳದ ಕೊಚುವೇಲಿ ರೈಲು ನಿಲ್ದಾಣಗಳ ನಡುವೆ ಓಣಂ ವಿಶೇಷ ರೈಲು ಸೇವೆ ನೈರುತ್ಯ ರೈಲ್ವೆ ನಿರ್ಧರಿಸಿದೆ.

ರೈಲು ಸಂಖ್ಯೆ 07333 ಸೆಪ್ಟೆಂಬರ್ 13ರಂದು ಬೆಳಿಗ್ಗೆ 6:55ಕ್ಕೆ ಹುಬ್ಬಳ್ಳಿ ನಿಲ್ದಾಣದಿಂದ ಹೊರಟು, ಮರುದಿನ ಬೆಳಿಗ್ಗೆ 6:45ಕ್ಕೆ ಕೊಚುವೇಲಿ ತಲುಪಲಿದೆ. ರೈಲು ಸಂಖ್ಯೆ 07334 ಸೆಪ್ಟೆಂಬರ್ 14ರಂದು ಮಧ್ಯಾಹ್ನ 12:50ಕ್ಕೆ ಕೊಚುವೇಲಿಯಿಂದ ಹೊರಟು, ಮರುದಿನ ಮಧ್ಯಾಹ್ನ 12:50ಕ್ಕೆ ಹುಬ್ಬಳ್ಳಿ ನಿಲ್ದಾಣಕ್ಕೆ ಬರಲಿದೆ.

ಈ ರೈಲು ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು,  ಪಾಲಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೋಟಯಂ, ತಿರುವಲ್ಲಾ, ಚೆಂಗಣ್ಣೂರ್, ಕಾಯಂಕುಲಂ ಮತ್ತು ಕೊಲ್ಲಂ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT