ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

150 ಸ್ಥಾನಗಳ ಗುರಿ, ಸಂಘಟನೆಗೆ ಒತ್ತು‌ ನೀಡಲು‌ ಸೂಚನೆ: ಅರುಣ್ ಸಿಂಗ್

Last Updated 29 ಡಿಸೆಂಬರ್ 2021, 6:25 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪಕ್ಷ ಸಂಘಟನೆಗೆ ಒತ್ತು‌ಕೊಡಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಶಪಥ‌ ಮಾಡಬೇಕು ಎಂದು ಪಕ್ಷದ ಎಲ್ಲಾ ನಾಯಕರಿಗೆ ಸೂಚಿಸಲಾಗಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ಇಲ್ಲಿ ನಡೆಯುತ್ತಿರುವ ಪಕ್ಷದ ಕಾರ್ಯಕಾರಿಣಿ ‌ಸಭೆ ಮುಗಿಸಿಕೊಂಡು ದೆಹಲಿಗೆ ತೆರಳುವ ಮೊದಲು ಮಾಧ್ಯಮದವರ ಜೊತೆ ಮಾತನಾಡಿ, ನಾವು ಎರಡು ದಿನಗಳ ಕಾರ್ಯಕಾರಿಣಿ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಪಕ್ಷದ ಸಾಧನೆಗಳನ್ನು ‌ಜನರ ಮುಂದಿಟ್ಟು ಚುನಾವಣೆ ಎದುರಿಸಲಿದ್ದೇವೆ ಎಂದರು.

ಈ ಹಿಂದೆ ಸಿದ್ಧರಾಮಯ್ಯ ಸರ್ಕಾರ ಇದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು. ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು. ಹೀಗಾಗಿ ಕಾಂಗ್ರೆಸ್ ಮೇಲೆ ದೇಶದ ಜನರಿಗೆ ವಿಶ್ವಾಸವಿಲ್ಲ. ಕಾಂಗ್ರೆಸ್ ನಲ್ಲಿ ಒಳಜಗಳ ನಡೆಯುತ್ತಿದೆ. ಬಿಜೆಪಿ ಮೇಲೆ ಇಲ್ಲಸಲ್ಲದ ಆರೋಪಗಳನ್ನ ಕಾಂಗ್ರೆಸ್ ಮಾಡುತ್ತಿದೆ ಎಂದು ಟೀಕಿಸಿದರು.

ಮುಂದಿನ ಚುನಾವಣೆಯಲ್ಲಿ150 ಕ್ಕೂ ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಮಾಡಿದ್ದೇವೆ. ಚುನಾವಣೆಗೂ ನಾವೆಲ್ಲ ಸನ್ನದ್ಧರಾಗಿದ್ದೇವೆ ಎಂದರು.

ಸಭೆಯಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಜನ ವಿರೋಧಿ ನೀತಿ ಬಗ್ಗೆಯೂ ಚರ್ಚೆ ಆಯಿತು. ಸಿದ್ದರಾಮಯ್ಯ ಸರ್ಕಾರದಲ್ಲಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ‌ಇದೆಲ್ಲವನ್ನೂ ಜನರೆದುರು ಇಡಲಾಗುತ್ತದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT