ಗುರುವಾರ , ಜುಲೈ 29, 2021
28 °C

ಆನ್‌ಲೈನ್‌ ಪರೀಕ್ಷೆ ನಿರ್ಧಾರ ಮರುಪರಿಶೀಲಿಸಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಕೆಎಲ್‌ಇ ಸೊಸೈಟಿಯ ಬಿ.ವಿ.ಬಿ. ಕಾಲೇಜಿನ ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಪರೀಕ್ಷೆ ಆಯೋಜಿಸಿದ ನಿರ್ಧಾರವನ್ನು ಪುನರ್‌ ಪರಿಶೀಲಿಸಬೇಕು ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಮನವಿ ಮಾಡಿದೆ.

ಈ ಕುರಿತು ಕೆಎಲ್‌ಇ ಸೊಸೈಟಿಯ ಸಿಬ್ಬಂದಿಗೆ ಮಂಗಳವಾರ ಮನವಿ ಸಲ್ಲಿಸಿರುವ ಒಕ್ಕೂಟದ ಪದಾಧಿಕಾರಿಗಳು ಕೊರೊನಾ ಸೋಂಕು ಹರಡುವ ಭೀತಿಯಲ್ಲಿಯೂ ಪರೀಕ್ಷೆಗಳನ್ನು ಆಯೋಜಿಸಿದ್ದು ಸರಿಯಲ್ಲ. ವಿದ್ಯಾರ್ಥಿಗಳು ವಾಸವಿರುವ ಬಹಳಷ್ಟು ಕಡೆ ಸರಿಯಾಗಿ ಮೊಬೈಲ್‌ ನೆಟ್‌ವರ್ಕ್ ಬರುವುದಿಲ್ಲ. ಸೊಸೈಟಿಯ ಈ ನಿರ್ಧಾರ ಅಪ್ರಾಯೋಗಿಕ ಎಂದು ದೂರಿದೆ.

ಆದ್ದರಿಂದ ಪರೀಕ್ಷೆ ನಡೆಸುವ ನಿರ್ಧಾರವನ್ನು ಕೈ ಬಿಟ್ಟು ಆಂತರಿಕ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅವರ ಫಲಿತಾಂಶ ಘೋಷಿಸಬೇಕು ಎಂದು ಆಗ್ರಹಿಸಿದರು. ಎನ್‌ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ಶಿವ ಪಿ. ಬೆಂಡಿಗೇರಿ, ಕಾಂಗ್ರೆಸ್‌ ಮುಖಂಡ ರಜತ್‌ ವಿ. ಉಳ್ಳಾಗಡ್ಡಿಮಠ ಇದ್ದರು.

ಕಾನೂನು ಕ್ರಮದ ಎಚ್ಚರಿಕೆ: ಪರೀಕ್ಷೆಗಳನ್ನು ಆಯೋಜಿಸಿದ್ದಕ್ಕೆ ಕೆಲ ವಿದ್ಯಾರ್ಥಿಗಳು ಸಾಮಾಜಿಕ ತಾಣಗಳಲ್ಲಿ ವಿನಾಕಾರಣ ವಿವಾದ ಹುಟ್ಟುಹಾಕುತ್ತಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದಲೇ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು; ಇದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು. ವಿವಾದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾಲೇಜು ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ.

‘ಆರನೆ ಸೆಮಿಸ್ಟರ್‌ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಒಂದೆರೆಡು ತಿಂಗಳುಗಳಲ್ಲಿ ಕ್ಯಾಂಪಸ್‌ ಸಂದರ್ಶನ ಆರಂಭವಾಗಲಿದೆ. ಪರೀಕ್ಷೆ ನಡೆಸದೆ ಮುಂದಿನ ತರಗತಿಗಳಿಗೆ ಉತ್ತೀರ್ಣರನ್ನಾಗಿ ಮಾಡಿದರೆ ಅದರಿಂದ ವಿದ್ಯಾರ್ಥಿಗಳಿಗೆ ಹಿನ್ನಡೆ ಉಂಟಾಗುತ್ತದೆ. ಇದರಿಂದ ವೃತ್ತಿ ಬದುಕಿನ ಮೇಲೂ ಪರಿಣಾಮ ಬೀರುತ್ತದೆ’ ಎಂದು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.