ಹುಬ್ಬಳ್ಳಿ: ಹುಬ್ಬಳ್ಳಿ –ಧಾರವಾಡ ಪೊಲೀಸ್ ಕಮಿಷನರೇಟ್‌ನ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಭಾನುವಾರ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಾದಕವಸ್ತು ಸೇವಿಸುವವರ ವಿರುದ್ದ 38 ಪ್ರಕರಣಗಳನ್ನು ದಾಖಲಿಸಿದ್ದಾರೆ.

354 ಜನ ಮಾದಕ ವಸ್ತು ಬಳಕೆದಾರರನ್ನು ವಶಕ್ಕೆ ಪಡೆದು ಅವರನ್ನು ಹುಬ್ಬಳ್ಳಿಯ ಕಿಮ್ಸ್ ಮತ್ತು ಧಾರವಾಡದ ಡಿಮ್ಹಾನ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಅದರಲ್ಲಿ 156 ಜನ ಗಾಂಜಾ ಸೇವಿಸಿರುವುದು ಧೃಢಪಟ್ಟಿದೆ ಎಂದು ಡಿಸಿಪಿ ಮಹಾನಿಂಗ ನಂದಗಾವಿ ತಿಳಿಸಿದರು.

ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುವ 156 ಜನರಲ್ಲಿ 79 ವಿದ್ಯಾರ್ಥಿಗಳಿದ್ದರು. ಅವರು ಅವಳಿ ನಗರದ ವಿವಿಧ ಶಾಲೆ ಹಾಗೂ ಕಾಲೇಜುಗಳಲ್ಲಿ ಓದುತ್ತಿದ್ದಾರೆ ಎಂದರು.

ಪ್ರತಿ ಸೋಮವಾರ ಶಾಲೆ, ಕಾಲೇಜುಗಳಲ್ಲಿ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸದ್ಯ ಗಾಂಜಾ ಸೇವನೆ ಮಾಡುವವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಮುಂದಿನ ದಿನಗಳಲ್ಲಿ ಡ್ರಗ್ ಪೆಡ್ಲರ್‌ಗಳನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದರು.

ಅವಳಿ ನಗರವನ್ನು ಮಾದಕವಸ್ತು ಮುಕ್ತ ಮಾಡುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಮೊದಲು ಗಾಂಜಾ ಮಾರಾಟ ಮಾಡುವವರ ವಿರುದ್ಧ ಮಾತ್ರ ಪ್ರಕರಣ ದಾಖಲಿಸಲಾಗುತ್ತಿತ್ತು. ಈಗ ಸೇವನೆ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿಂದೆ ಕಾರ್ಯಾಚರಣೆ ವೇಳೆ 506 ಜನ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿತ್ತು. 112 ಪ್ರಕರಣ ದಾಖಲಿಸಲಾಗಿತ್ತು ಎಂದರು.

ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟವರು, ಅವರ ಪಾಲಕ, ಪೋಷಕರನ್ನು ಹುಬ್ಬಳ್ಳಿಯ ರಂಭಾಪುರಿ ಕಲ್ಯಾಣ ಮಂಟಪಕ್ಕೆ ಕರೆತಂದು ಅವರಿಗೆ ಜಾಗೃತಿ ಮೂಡಿಸಲಾಯಿತು.

ಡಿಸಿಪಿ ರವೀಶ್ ಸಿ.ಆರ್, ಎಸಿಪಿ ಶಿವಪ್ರಕಾಶ್ ನಾಯ್ಕ್, ವಿವಿಧ ಠಾಣೆಗಳ ಇನ್‌ಸ್ಪೆಕ್ಟರ್‌ಗಳು ಈ ವೇಳೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.