ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಗೆ ರಷ್ಯಾ, ಚೀನಾದಿಂದ ಆಕ್ಸಿಜನ್ ಕಾನ್ಸೆಂಟ್ರೇಟರ್‌

Last Updated 2 ಮೇ 2021, 17:33 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ರಷ್ಯಾ ಹಾಗೂ ಚೀನಾದಿಂದ ಶುದ್ಧ ಆಮ್ಲಜನಕ ಪೂರೈಸುವ ಆಕ್ಸಿಜನ್ ಕಾನ್ಸೆಂಟ್ರೇಟರ್‌ಗಳನ್ನು ಆಮದು ಮಾಡಿಕೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ.

35 ಆಕ್ಸಿಜನ್ ಕಾನ್ಸೆಂಟ್ರೇಟರ್‌ಗಳನ್ನು ರಷ್ಯಾದಿಂದ ತರಿಸಲು ಈಗಾಗಲೇ ನೋಂದಣಿ ಮಾಡಲಾಗಿದೆ. ಉಳಿದ 100 ಕಾನ್ಸೆಂಟ್ರೇಟರ್‌ಗಳು ಚೀನಾದಿಂದ ಬರಲಿವೆ. ವೈದ್ಯಕೀಯ ತುರ್ತು ಉಪಕರಣಗಳನ್ನು ಭಾರತಕ್ಕೆ ರಫ್ತು ಮಾಡಲು ಚೀನಾ ಕಟ್ಟುನಿಟ್ಟಿನ ನಿರ್ಬಂಧ ಹೇರಿದ್ದು, ತಡವಾಗಿಯಾದರೂ ಇಲ್ಲಿಗೆ ಬರುವ ಸಾಧ್ಯತೆಯಿದೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ‘‍ಪ್ರಜಾವಾಣಿ’ ಜೊತೆ ಮಾತನಾಡಿ ‘ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ವಿವಿಧ ಕಂಪನಿಗಳಿಂದ 135 ಆಕ್ಸಿಜನ್ ಕಾನ್ಸೆಂಟ್ರೇಟರ್‌ಗಳನ್ನು ತರಿಸಲು ಹಣಕಾಸಿನ ನೆರವು ಕೊಡಿಸುವುದಾಗಿ ತಿಳಿಸಿದ್ದಾರೆ. ರಷ್ಯಾದಿಂದ ಯಾವಾಗ ಬರಲಿವೆ ಎನ್ನುವುದು ಒಂದೆರೆಡು ದಿನಗಳಲ್ಲಿ ಗೊತ್ತಾಗಲಿದೆ. ಪ್ರತಿ ಆಕ್ಸಿಜನ್ ಕಾನ್ಸೆಂಟ್ರೇಟರ್‌ಗಳನ್ನು ಏಕಕಾಲದಲ್ಲಿ 10 ಜನ ರೋಗಿಗಳಿಗೆ ಕೊಡಬಹುದು’ ಎಂದರು.

‘ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್‌)ಯಲ್ಲಿ ಯಾವುದೇ ಔಷಧಿಯ ಕೊರತೆಯಿಲ್ಲ. ಒಂದು ವೇಳೆ ಕೊರತೆಯಿದ್ದರೆ ಟೆಂಡರ್‌ ಕರೆದು ಔಷಧಗಳನ್ನು ಖರೀದಿಸುವ ಸ್ವಾತಂತ್ರ್ಯ ಅವರಿಗೆ ನೀಡಲಾಗಿದೆ. ಔಷಧಗಳ ಖರೀದಿಗೆ ಅನುದಾನದ ಕೊರೆತೆಯಾದರೆ ಖರೀದಿ ಬಿಲ್‌ಗಳನ್ನು ಜಿಲ್ಲಾಡಳಿತಕ್ಕೆ ಕಳುಹಿಸಿದರೆ ಹಣ ನೀಡಲಾಗುವುದು’ ಎಂದರು.

ಜಿಲ್ಲೆಯ ಆಯುರ್ವೇದಿಕ್‌ ಹಾಗೂ ಹೋಮಿಯೋಪಥಿ ಆಸ್ಪತ್ರೆಗಳನ್ನು ಕೋವಿಡ್‌ ಕೇರ್‌ ಕೇಂದ್ರಗಳನ್ನಾಗಿ ಮಾಡಲು ಜಿಲ್ಲಾಡಳಿತ ಯೋಜನೆ ರೂಪಿಸುತ್ತಿದೆ. ಕಡಿಮೆ ಲಕ್ಷಣಗಳು ಇರುವ ಸೋಂಕಿತರಿಗೂ ಆಕ್ಸಿಜನ್‌ ಅಗತ್ಯವಿದ್ದರೆ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT