ಹುಬ್ಬಳ್ಳಿ: ಕೋವಿಡ್ ರೋಗಿಗಳಿಗೆ ನೆರವಾಗಲು ರಾಜ್ಯದ ಮೊದಲ ಆಮ್ಲಜನಕ ಘಟಕವನ್ನು ಹುಬ್ಬಳ್ಳಿಯಲ್ಲಿ ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ರಾಜ್ಯದ ಸಕ್ಕರೆ ಹಾಗೂ ಜವಳಿ ಖಾತೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.
ಅಧ್ಯಾಪಕ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಸೀಮಾ ಸಿದ್ದು ಮೊಗಲಿಶೆಟ್ಟರ್ ಪರ ಪಾಲಿಕೆ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ‘ಧಾರವಾಡದ ಸಿವಿಲ್ ಆಸ್ಪತ್ರೆ, ನವಲಗುಂದ, ಕಲಘಟಗಿ, ಕುಂದಗೋಳ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಘಟಕ ಸ್ಥಾಪಿಸಲಾಗುತ್ತಿದೆ. ಕೋವಿಡ್ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ’ ಎಂದರು.
ಉದ್ಯಮಿ ವಿಜಯ ಶೆಟ್ಟರ್, ನಿಖಿಲ್ ಶೆಟ್ಟರ್, ಬಿಜೆಪಿ ಮುಖಂಡ ಸಿದ್ದು ಮೊಗಲಿಶೆಟ್ಟರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.