ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ಎ ಮೀಸಲಾತಿಗೆ ಆಗ್ರಹ: ಪಂಚಮಸಾಲಿ ಸಮಾಜದಿಂದ ಬೃಹತ್ ಪ್ರತಿಭಟನೆ

Last Updated 31 ಮೇ 2022, 3:39 IST
ಅಕ್ಷರ ಗಾತ್ರ

ಕುಂದಗೋಳ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಕುಂದಗೋಳ ತಾಲ್ಲೂಕು ಲಿಂಗಾಯತ ಪಂಚಮಸಾಲಿ ಸಮಾಜದವರು ಪಟ್ಟಣದಲ್ಲಿ ಸೋಮವಾರ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ, ಗಾಳಿ ಮರಿಯಮ್ಮ ದೇವಸ್ಥಾನ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಲಿಂಗಾಯತ ಪಂಚಮಸಾಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉದ್ಯೋಗ ಸಿಗಬೇಕು ಹಾಗೂ ಬಡ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂದರೆ 2ಎ ಮೀಸಲಾತಿ ನೀಡಬೇಕು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಮೀಸಲಾತಿ ನೀಡದಿದ್ದರೆ ಶಿಗ್ಗಾವಿಯ ಮುಖ್ಯಮಂತ್ರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದರು.

ಕೃಷಿ ಉತ್ಪನ್ನ ಮತ್ತು ರಪ್ತು ನಿಗಮ ಮಂಡಳಿ ಅಧ್ಯಕ್ಷ ಎಸ್.ಐ. ಚಿಕ್ಕನಗೌಡ್ರ ಮಾತನಾಡಿ, ಶ್ರೀಗಳ ಹೋರಾಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.

ಈ ವೇಳೆ ಟ್ರ್ಯಾಕ್ಟರ್ ಮೂಲಕ ರಾಣಿ ಚನ್ನಮ್ಮ ಭಾವಚಿತ್ರ ಮೆರವಣಿಗೆ ನಡೆಯಿತು.

ಮುಖಂಡ ಅರವಿಂದ್ ಕಟಗಿ, ಟಿ.ಎಸ್. ಗೌಡಪ್ಪಗೌಡ್ರ, ಮಲ್ಲಪ್ಪ ಮಾರಡಗಿ, ಸೋಮರಾವ್ ದೇಸಾಯಿ, ಬಸವಂತಪ್ಪ ಗಿಡಸಕ್ಕನವರ, ನಾಗರಾಜ್ ದೇಶಪಾಂಡೆ, ಬಸವರಾಜ್ ನಾವಳ್ಳಿ, ವೆಂಕನಗೌಡ ಪಾಟೀಲ, ಮುತ್ತು ಚಕಾರಿ, ರವಿ ಬಂಕದ್, ವಿದ್ಯಾಧರ ಸುಂಕದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT