ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಚಟಗೇರಿಯಲ್ಲಿ ₹228 ಕೋಟಿಯಲ್ಲಿ ಪಾರ್ಕ್‌

ಟರ್ಮಿನಲ್‌ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವ: ವೀರಯ್ಯ
Last Updated 16 ಜನವರಿ 2021, 14:52 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿ, ಬೆಂಗಳೂರು, ಮೈಸೂರಿನಲ್ಲಿಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಇಲ್ಲಿನ ಹೊರವಲಯದಅಂಚಟಗೇರಿಯಲ್ಲಿ ₹228 ಕೋಟಿ ವೆಚ್ಚದಲ್ಲಿ ಲಾಜಿಸ್ಟಿಕ್ ಪಾರ್ಕ್‌ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷ ಡಿ.ಎಸ್.ವೀರಯ್ಯ ಹೇಳಿದರು.

ಅಂಚಟಗೇರಿಯಲ್ಲಿ ಉದ್ದೇಶಿತ ಟ್ರಕ್ ಟರ್ಮಿನಲ್ ಪರಿಶೀಲಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪ್ರತಿ ಜಿಲ್ಲೆಯಲ್ಲೂ ಟ್ರಕ್ ಟರ್ಮಿನಲ್ ನಿರ್ಮಿಸುವ ಉದ್ದೇಶವಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ನಿರ್ಮಾಣಕ್ಕೆ ಅಗತ್ಯ ಇರುವ ಜಮೀನು ನೀಡುವಂತೆ ಕೋರಲಾಗಿದೆ. ಸರ್ಕಾರಿ ಜಮೀನುಗಳು ಲಭ್ಯವಿರದಿದ್ದರೆ, ನಿಗಮದ ವತಿಯಿಂದ ಖಾಸಗಿ ಜಮೀನು ಖರೀದಿ ಮಾಡಲಾಗುವುದು. ಇದಕ್ಕಾಗಿ ₹300 ಕೋಟಿ ಮೀಸಲಿಡುವಂತೆ ಸರ್ಕಾರಕ್ಕೆ ಕೋರಲಾಗುವುದು’ ಎಂದರು.

‘ಅಂಚಗೇರಿಯಲ್ಲಿ 56 ಎಕರೆ ಜಮೀನು ಮಂಜೂರು ಆಗಿದೆ. ಇದರಲ್ಲಿ 4 ಎಕರೆ ಗ್ರಾಮಕ್ಕೆ ಹೊಂದಿಕೊಂಡಂತಿದೆ.ಇದನ್ನು ಗ್ರಾಮಕ್ಕೆ ನೀಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಈ ಕುರಿತು ನಿರ್ಧರಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.ಅಂಚಟಗೇರಿಯ 43.38 ಎಕರೆಯಲ್ಲಿ, 2,000 ಟ್ರಕ್ ನಿಲುಗಡೆ, 1,500 ದ್ವಿಚಕ್ರ, 700 ನಾಲ್ಕು ಚಕ್ರದ ವಾಹನಗಳ ನಿಲುಗಡೆ ಸಾಮರ್ಥ್ಯವುಳ್ಳ ಟ್ರಕ್ ಟರ್ಮಿನಲ್ ನಿರ್ಮಿಸಲಾಗುವುದು’ ಎಂದರು.

‘ರಾಜ್ಯ ಸರ್ಕಾರ 2018-19ರ ಬಜೆಟ್‌ನಲ್ಲಿ ₹110 ಕೋಟಿ ಮೀಸಲಿಟ್ಟಿದೆ.ನಿಗಮದ ವತಿಯಿಂದ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

ವ್ಯವಸ್ಥಾಪಕ ನಿರ್ದೇಶಕ ಪುರುಷೋತ್ತಮ್, ನಿರ್ದೇಶಕ ಗೈಲುಸಾಬ್ ಎಂ ಹೊನ್ನಾಳ್, ಅಧಿಕಾರಿಗಳಾದ ಹೇಮಣ್ಣ, ಜೀವಣ್ಣ, ಗ್ರಾಮ ಲೆಕ್ಕಾಧಿಕಾರಿ ದಾನೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT