ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಬೇಸಿಗೆಯಲ್ಲಿ ಪ್ರಯಾಣಿಕರ ದಟ್ಟಣೆ– ಹೆಚ್ಚುವರಿ ರೈಲು

Published 6 ಮೇ 2024, 13:52 IST
Last Updated 6 ಮೇ 2024, 13:52 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಹೆಚ್ಚುವರಿ ವಿಶೇಷ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ಮೇ 12ರಂದು ರಾತ್ರಿ 12.30ಕ್ಕೆ ಬೆಳಗಾವಿ ರೈಲು ನಿಲ್ದಾಣದಿಂದ ಉತ್ತರ ಪ್ರದೇಶದ ಗೋಮತಿನಗರಕ್ಕೆ ವಿಶೇಷ ರೈಲು(07389) ಹೊರಡಲಿದೆ. ಎಸ್‌ಎಸ್‌ಎಸ್ ಹುಬ್ಬಳ್ಳಿ, ವಿಜಯಪುರ, ಸೊಲ್ಲಾಪುರ, ದೌಂಡ್, ಮನ್ಮಾಡ್, ಭೂಸಾವಲ್, ಇಟಾರ್ಸಿ, ಕಾನ್ಪುರ ಸೆಂಟ್ರಲ್, ಐಶ್‌ಬಾಗ್ ಮೂಲಕ ಮರುದಿನ ಬೆಳಿಗ್ಗೆ 7.45ಕ್ಕೆ ಗೋಮತಿನಗರ ತಲುಪಲಿದೆ.

ಮೇ 12ರಿಂದ ಜೂನ್‌ 30ರ ವರೆಗೆ ವಿಶೇಷ ರೈಲು ಸಂಚರಿಸಲಿದೆ.

ರೈಲು ಸಂಚಾರ ತಾತ್ಕಾಲಿಕ ರದ್ದು: ನಾಗವಂಗಲ– ಅಜ್ಜಂಪುರ ರೈಲು ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಮೇ 10, 17, 24, 31 ಹಾಗೂ ಜೂನ್‌ 21ರಂದು ಎಸ್‌ಎಸ್‌ಎಸ್ ಹುಬ್ಬಳ್ಳಿ– ಅರಸೀಕೆರೆ ಎಕ್ಸ್‌ಪ್ರೆಸ್‌(16214) ರೈಲು ಸಂಚಾರ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT