ಭಾನುವಾರ, ಏಪ್ರಿಲ್ 5, 2020
19 °C

ಹಾವೇರಿಯಲ್ಲಿ ಪಾಟೀಲ ಪುಟ್ಟಪ್ಪ ಅಂತ್ಯಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ 10.10ಕ್ಕೆ ನಿಧನರಾದ ಹಿರಿಯ ಪತ್ರಕರ್ತ, ಸಾಹಿತಿ ಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆ ಮಂಗಳವಾರ ಹಾವೇರಿ ತಾಲ್ಲೂಕು ಹಲಗೇರಿಯಲ್ಲಿ ನಡೆಯಲಿದೆ. 

ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಿಗ್ಗೆ 9ರಿಂದ 1ರವರೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು.

ಅಂತ್ಯ ಸಂಸ್ಕಾರವನ್ನು ಹಾವೇರಿ ತಾಲ್ಲೂಕು ಹಲಗೇರಿಯಲ್ಲಿ ನೆರವೇರಿಸಲಾಗುವುದು ಎಂದು ಪಾಟೀಲ ಪುಟ್ಟಪ್ಪ ಅವರ ಪುತ್ರ ಅಶೋಕ್ ಪಾಟೀಲ್ ತಿಳಿಸಿದರು.

ಇದನ್ನೂ ಓದಿ: ನಾಡೋಜ ಪಾಟೀಲ ಪುಟ್ಟಪ್ಪ ನಿಧನ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು