ಶುಕ್ರವಾರ, ಡಿಸೆಂಬರ್ 2, 2022
20 °C

‘ಪೇ ಮೇಯರ್’ ಪೋಸ್ಟರ್: ಕಾಂಗ್ರೆಸ್ ಮುಖಂಡರಿಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ರಾಷ್ಟ್ರಪತಿಗೆ ಹಮ್ಮಿಕೊಂಡಿದ್ದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ದುಂದುವೆಚ್ಚ ಮಾಡಲಾಗಿದೆ ಎಂದು ಆರೋಪಿಸಿ, ನಗರದ ವಿವಿಧೆಡೆ ‘ಪೇ ಮೇಯರ್’ ಪೋಸ್ಟರ್‌ಗಳನ್ನು ಅಂಟಿಸಿದ್ದ ಕಾಂಗ್ರೆಸ್ ಮುಖಂಡರಿಗೆ ಮೇಯರ್ ಈರೇಶ ಅಂಚಟಗೇರಿ ಅವರು ಸೋಮವಾರ ಮಾನಹಾನಿ ನೋಟಿಸ್ ಕಳಿಸಿದ್ದಾರೆ.

ಹುಬ್ಬಳ್ಳಿಯ ರಜತ ಉಳ್ಳಾಗಡ್ಡಿಮಠ, ಧಾರವಾಡದ ದೀಪಕ ಚಿಂಚೋರೆ ಹಾಗೂ ಮಂಜುನಾಥ ನಡಟ್ಟಿ ಅವರಿಗೆ ವಕೀಲರ ಮೂಲಕ ನೋಟಿಸ್ ಕಳಿಸಿರುವ ಮೇಯರ್, ಮಾನಹಾನಿಗೆ ಪರಿಹಾರವಾಗಿ ಮೂವರೂ ತಲಾ ₹1 ಕೋಟಿಯನ್ನು ಮಹಾನಗರ ಪಾಲಿಕೆಗೆ ಸಂದಾಯ ಮಾಡಬೇಕು.

ಏಳು ದಿನಗಳೊಳಗೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ, ನಿಮ್ಮ ವಿರುದ್ಧ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು