ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್ ಕ್ರೀಡಾಕೂಟ | ದೈಹಿಕ ಸಾಮರ್ಥ್ಯ ಇದ್ದರಷ್ಟೇ ಸಾಧನೆ ಸಾಧ್ಯ: ಲಾಬೂರಾಮ್

Last Updated 5 ಮಾರ್ಚ್ 2021, 4:09 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಉತ್ತಮ ದೈಹಿಕ ಕ್ಷಮತೆ ಇದ್ದರಷ್ಟೇ ವೃತ್ತಿಬದುಕು ಹಾಗೂ ವೈಯಕ್ತಿಕ ‌ಬದುಕಿನಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಆದ್ದರಿಂದ ‌ಪೊಲೀಸರು ದೈಹಿಕ ಸದೃಢತೆಗೆ ಒತ್ತು‌ ಕೊಡಬೇಕು ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್‌ನಆಯುಕ್ತ ಲಾಬೂರಾಮ್ ಹೇಳಿದರು‌.

ಇಲ್ಲಿನ ಗೋಕುಲ ರಸ್ತೆಯ ಪೊಲೀಸ್ ಮೈದಾನದಲ್ಲಿ ಶುಕ್ರವಾರ ಹುಬ್ಬಳ್ಳಿ ಧಾರವಾಡ ಪೊಲೀಸ್ ‌ಕಮಿಷನರೇಟ್ ವ್ಯಾಪ್ತಿಯ 2019-20ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು‌ ಮಾತನಾಡಿದರು.

ನಿತ್ಯದ ಒತ್ತಡಗಳು ನಡುವೆ ಸಮಯ ಹೊಂದಿಸಿಕೊಂಡು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಯನ್ನು ಜೀವನದ ಭಾಗ ಮಾಡಿಕೊಳ್ಳಬೇಕು. ನಿಯಮಿತವಾಗಿ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ ಕ್ರೀಡೆ ಬದುಕಿನ ಅವಿಭಾಜ್ಯ ಅಂಗವಾಗಬೇಕು. ಶಿಸ್ತಿಗೆ ಹೆಸರಾದ ಪೊಲೀಸ್ ಇಲಾಖೆಯ ಸಾಮರ್ಥ್ಯ ಎನೆಂಬುದು ಲಾಕ್‌ಡೌನ್ ಸಮಯದಲ್ಲಿ ಸಾಬೀತಾಗಿದೆ. ಕೋವಿಡ್ ಪ್ರಕರಣಗಳು ಹೆಚ್ಚಿದ್ದ ಸಮಯದಲ್ಲಿ ಪೊಲೀಸರು ಶಿಸ್ತಿನಿಂದ ಕೆಲಸ ಮಾಡಿದರು ಎಂದು‌ ಮೆಚ್ಚುಗೆ ವ್ಯಕ್ತಪಡಿಸಿದರು.

ಬೇರೆ ಸರ್ಕಾರಿ ‌ನೌಕರರಿಗೆ ಹೋಲಿಸಿದರೆ ಪೊಲೀಸ್ ಸಿಬ್ಬಂದಿಗೆ ಕೆಲಸ ಹೆಚ್ಚು. ಸಮಯ ಕಡಿಮೆ. ಈ ಒತ್ತಡದ ಸಮಯದಲ್ಲಿ ಪೊಲೀಸರು ತಮ್ಮ ಆರೋಗ್ಯದ ಬಗ್ಗೆಯೂ ಗಮನ ಹರಿಸಬೇಕು. ಶಿಸ್ತು ಕಾಪಾಡುವವರ ಬದುಕು ಆರೋಗ್ಯವಾಗಿದ್ದರೆ, ಸಮಾಜವು ಸುಂದರವಾಗಿರುತ್ತದೆ ಎಂದರು.

ಮೂರು ದಿನ ನಡೆಯುವ ಕ್ರೀಡಾಕೂಟದಲ್ಲಿ ಆರು ತಂಡಗಳು ಪಾಲ್ಗೊಂಡಿವೆ. ಪ್ರತಿ ‌ಕ್ರೀಡಾ ತಂಡಗಳು ಪ್ರದರ್ಶಿಸಿದ ಪಥಸಂಚಲನ ಗಮನ ಸೆಳೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT