ಭಾನುವಾರ, ಆಗಸ್ಟ್ 1, 2021
28 °C

ಧಾರವಾಡ | ಪ್ಲಾಸ್ಮಾ ಚಿಕಿತ್ಸೆ: ಸೋಂಕಿತ ವ್ಯಕ್ತಿ ಮತ್ತಷ್ಟು ಚೇತರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕೋವಿಡ್‌ 19 ದೃಢಪಟ್ಟಿದ್ದ ಮಹಾರಾಷ್ಟ್ರದಿಂದ ಮರಳಿದ್ದ ನಗರದ ಲಾರಿ ಚಾಲಕನಿಗೆ (ಪಿ–2710) ಪ್ಲಾಸ್ಮಾ ಚಿಕಿತ್ಸೆ ನೀಡಿದ ಬಳಿಕ ಆರೋಗ್ಯದಲ್ಲಿ ಗುರುವಾರ ಮತ್ತಷ್ಟು ಚೇತರಿಕೆ ಕಂಡು ಬಂದಿದೆ.

ಪ್ಲಾಸ್ಮಾ ಚಿಕಿತ್ಸೆ ನೀಡಲು ಕಿಮ್ಸ್‌ಗೆ ಅನುಮತಿ ಲಭಿಸಿದ ಬಳಿಕ ಇಲ್ಲಿನ ವೈದ್ಯರು ಪ್ರಾಯೋಗಿಕವಾಗಿ ಮಾಡಿದ ಮೊದಲ ಪ್ಲಾಸ್ಮಾ ಚಿಕಿತ್ಸೆ ಇದಾಗಿದೆ. ತೊರವಿ ಹಕ್ಕಲದ ಖಬರಸ್ತಾನದ ಕಾವಲುಗಾರನ (ಪಿ–363) ದೇಹದಿಂದ ಪ್ಲಾಸ್ಮಾ ಪಡೆದು ಚಿಕಿತ್ಸೆ ನೀಡಲಾಗಿದೆ. 64 ವರ್ಷದ ‌ಸೋಂಕಿತ ವ್ಯಕ್ತಿ ಆಸ್ಪತ್ರೆಗೆ ದಾಖಲಾದ ಆರಂಭದ ದಿನಗಳಲ್ಲಿ ಸಾಕಷ್ಟು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಈಗ ಶೇ 80ರಷ್ಟು ಗುಣಮುಖರಾಗಿದ್ದಾರೆ ಎಂದು ಕಿಮ್ಸ್‌ ವೈದ್ಯರು ತಿಳಿಸಿದ್ದಾರೆ.

ಪ್ಲಾಸ್ಮಾ ಚಿಕಿತ್ಸೆ ನೀಡಿದ ವೈದ್ಯರ ತಂಡದಲ್ಲಿದ್ದ ಕಿಮ್ಸ್‌ ಔಷಧ ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಮ್‌ ಕೌಲಗುಡ್‌ ‘ಪ್ರಜಾವಾಣಿ’ ಜೊತೆ ಮಾತನಾಡಿ ‘ಪ್ಲಾಸ್ಮಾ ಚಿಕಿತ್ಸೆ ಪಡೆದ ವ್ಯಕ್ತಿಗೆ ಈಗ ಆಕ್ಸಿಜನ್‌ ಯಂತ್ರ ಬೇಕಾಗಿಲ್ಲ. ಸ್ವತಂತ್ರ್ಯವಾಗಿ ಉಸಿರಾಡುವಷ್ಟು ಚೇತರಿಸಿಕೊಂಡಿದ್ದಾರೆ. ಎರಡು ದಿನಗಳಿಂದ ಕೆಮ್ಮು, ನೆಗಡಿ, ಜ್ವರ, ಉಸಿರಾಟದ ತೊಂದರೆ ಯಾವುದೂ ಕಂಡು ಬಂದಿಲ್ಲ. ಕೆಲ ದಿನಗಳಲ್ಲಿ ಪೂರ್ಣವಾಗಿ ಗುಣಮುಖರಾಗಲಿದ್ದಾರೆ. 14 ದಿನಗಳು ಪೂರ್ಣಗೊಂಡ ಬಳಿಕ ಬಿಡುಗಡೆ ಮಾಡಲಾಗುತ್ತದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು