ರಾಷ್ಟ್ರವ್ಯಾಪಿ 7,500 ಪ್ರತಿನಿಧಿಗಳು ಭಾಗಿ
ವಿವೇಕಾನಂದರ ಜಯಂತಿ ಅಂಗವಾಗಿ ರಾಷ್ಟ್ರೀಯ ಯುವಜನೋತ್ಸವಕ್ಕೆ ಮೋದಿ ಚಾಲನೆ: ಜೋಶಿ

ಧಾರವಾಡ: ‘ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಜ.12ರಿಂದ 16ರ ವರೆಗೆ ರಾಷ್ಟ್ರೀಯ ಯುವಜನೋತ್ಸವ ನಗರದಲ್ಲಿ ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
‘ದೇಶದ ವಿವಿಧೆಡೆಯಿಂದ ಸುಮಾರು 7,500 ಪ್ರತಿನಿಧಿಗಳು, ಆಯಾರಾಜ್ಯಗಳ ಸಾಂಸ್ಕೃತಿಕ ರಾಯಭಾರಿಗಳು ಉತ್ಸವದಲ್ಲಿ ಭಾಗವಹಿಸಲಿದ್ದಾರೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಯುವಜನೋತ್ಸವಕ್ಕೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ತಲಾ ₹10 ಕೋಟಿ ಅನುದಾನ ನೀಡಿವೆ. ಕರ್ನಾಟಕ ಕಲಾ ಕಾಲೇಜು ಮೈದಾನದಲ್ಲಿ ಸಂಜೆ 6ರಿಂದ 9ರವರೆಗೆ ವಿವಿಧ ರೀತಿಯ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ಜೋಶಿ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.