ಹುಬ್ಬಳ್ಳಿ: ‘ನಗರದ ಮಂಟೂರು ರಸ್ತೆಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ (ಪಿಎಂಎವೈ) ನಿರ್ಮಿಸಿರುವ 1,008 ಮನೆಗಳು ಸೇರಿ ರಾಜ್ಯದ ವಿವಿಧೆಡೆ ನಿರ್ಮಿಸಿರುವ ಒಟ್ಟು 42,345 ಮನೆಗಳ ಹಸ್ತಾಂತರ ಕಾರ್ಯಕ್ರಮವನ್ನು ಜನವರಿ 24ರಂದು ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ’ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

‘ಮುಖ್ಯಮಂತ್ರಿಯವರ ವಿಶೇಷ ಅನುದಾನದಡಿ ಮನೆಗಳನ್ನು ನಿರ್ಮಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಸಂಡೂರು, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು ಸೇರಿ ವಿವಿಧೆಡೆ ನಿರ್ಮಿಸಿದ ಮನೆಗಳನ್ನು ಲೋಕಾರ್ಪಣೆ ಮಾಡುವರು. ಇದೇ ವೇಳೆ ಮನೆಗಳ ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ’ ಎಂದು ಅವರು ಬುಧವಾರ ‘ಪ್ರಜಾವಾಣಿ’ಗೆ ತಿಳಿಸಿದರು.

‘ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕೋರಲಾಗಿದೆ’ ಎಂದರು ಅವರು ತಿಳಿಸಿದರು.

‘ರಾಜ್ಯದಲ್ಲಿನ ವಸತಿ ರಹಿತ ಬಡವರಿಗೆ ಕನಿಷ್ಠ ಸೌಲಭ್ಯಗಳನ್ನು ಹೊಂದಿರುವ ಮನೆಗಳನ್ನು ನೀಡಬೇಕು ಎಂಬ ಉದ್ದೇಶದಿಂದ ಆರಂಭದಲ್ಲಿ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು, ನಂತರ ಮುಖ್ಯಮಂತ್ರಿ ಅವರು ಮನವೊಲಿಸಿ ಸಚಿವ ಸಂಪುಟದಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಯಿತು’ ಎಂದು ಅವರು ತಿಳಿಸಿದರು.

‘2024ರಲ್ಲಿ ಮೊದಲ ಹಂತದಲ್ಲಿ 36,789 ಮನೆಗಳನ್ನು ಹಂಚಿಕೆ ಮಾಡಲಾಯಿತು. ನಂತರ ಎರಡನೇ ಹಂತದಲ್ಲಿ 42,345 ಮನೆಗಳನ್ನು ಹಂಚಿಕೆ ಮಾಡಲಾಗುವುದು. ಇದರಲ್ಲಿಯೇ ಧಾರವಾಡ ಜಿಲ್ಲೆಯಲ್ಲಿ ನಿರ್ಮಿಸಿದ 2,780 ಮನೆಗಳೂ ಸೇರಿವೆ. ಮೂರನೇ ಹಂತದಲ್ಲಿ ಹೆಚ್ಚುವರಿಯಾಗಿ 30 ಸಾವಿರ ಮನೆಗಳನ್ನು ಬರುವ ಮೇ ತಿಂಗಳಲ್ಲಿ ಹಂಚಿಕೆ ಮಾಡಲಾಗುವುದು. ರಾಜೀವ್ ಗಾಂಧಿ ಆಶ್ರಯ ಯೋಜನೆಯಡಿ 47,860 ಮನೆಗಳನ್ನೂ ಶೀಘ್ರದಲ್ಲಿಯೇ ಹಂಚಿಕೆ ಮಾಡಲಾಗುವುದು’ ಎಂದು ವಿವರಿಸಿದರು.

‘ಪ್ರತಿ ಮನೆಯನ್ನು ₹7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ₹1.50ಲಕ್ಷ ಸಬ್ಸಿಡಿ ನೀಡಲಾಗಿದೆ. ಆದರೆ, ಇದಕ್ಕೂ ಶೇ 18ರಷ್ಟು ಜಿಎಸ್ಟಿ ಹಾಕಲಾಗಿದೆ. ಫಲಾನುಭವಿಗಳಿಂದ ₹1ಲಕ್ಷ ಪಡೆದು, ಉಳಿದ ಹಣವನ್ನು ರಾಜ್ಯ ಸರ್ಕಾರದಿಂದಲೇ ಭರಿಸಿ, ಮನೆ ನಿರ್ಮಿಸಲಾಗಿದೆ’ ಎಂದರು.

‘ಈ ಹಿಂದೆ ಇದ್ದ ಬಿಜೆಪಿ, ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಒಂದೇ ಒಂದು ಮನೆ ನಿರ್ಮಿಸಿಕೊಟ್ಟಿಲ್ಲ. ಒಂದು ವೇಳೆ ಈ ಬಗ್ಗೆ ಸಾಬೀತುಪಡಿಸಿದರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ’ ಎಂದರು.

ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ಅವರು, ‘ಅಗತ್ಯ ಸೌಲಭ್ಯಗಳನ್ನು ಹೊಂದಿರುವ ಮನೆಗಳನ್ನು ವ್ಯವಸ್ಥಿತವಾಗಿ ನಿರ್ಮಿಸಲಾಗಿದೆ’ ಎಂದರು.

ಬಿಲ್ಡರ್ಗಳ ಸಹಯೋಗದಲ್ಲಿ ಸರ್ಕಾರದ ನಿವೇಶನದಲ್ಲೇ ‘ಸಾರ್ವಜನಿಕ–ಖಾಸಗಿ ಸಹಭಾಗಿತ್ವ’ (ಪಿಪಿಪಿ) ಮಾದರಿಯಲ್ಲಿ ವ್ಯವಸ್ಥಿತ ಮತ್ತು ಅಗತ್ಯ ಸೌಲಭ್ಯ ಒಳಗೊಂಡಿರುವ ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ಹಂಚುವ ಚಿಂತನೆ ಇದೆ.
–ಜಮೀರ್ ಅಹಮದ್ ಖಾನ್ ವಸತಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.