ಹುಬ್ಬಳ್ಳಿ: ‘ನಗರದ ಮಂಟೂರು ರಸ್ತೆಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ (ಪಿಎಂಎವೈ) ನಿರ್ಮಿಸಿರುವ 1,008 ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ’ ಎಂದು ರಾಜ್ಯ ಬಿಜೆಪಿ ಎಸ್ಸಿ ಮೊರ್ಚಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ ಆರೋಪಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ಮನೆಗಳ ನಿರ್ಮಾಣಕ್ಕಾಗಿ ಬಳಸಿಕೊಳ್ಳಲಾಗಿದೆ. ಇದು ಪರಿಶಿಷ್ಟ ಸಮುದಾಯದ ಜನರಿಗೆ ಮಾಡಿದ ಅನ್ಯಾಯವಾಗಿದೆ. ಈ ಬಗ್ಗೆ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಮಾಹಿತಿ ಇದ್ದರೂ ಸದನದಲ್ಲಿ ಇದನ್ನು ಪ್ರಶ್ನಿಸಿಲ್ಲ’ ಎಂದು ದೂರಿದರು.

‘ಮನೆಗಳ ನಿರ್ಮಾಣದ ಗುತ್ತಿಗೆದಾರರಿಗೆ ₹1,100 ಕೋಟಿ ಬಿಲ್ ಪಾವತಿಸಿಲ್ಲ. ಬಿಲ್ ಪಾವತಿಗಾಗಿ ಶೇ 28ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಬಗ್ಗೆ ತನಿಖೆಯಾಗಬೇಕು’ ಎಂದು ಆಗ್ರಹಿಸಿದರು.

‘ಮನೆಗಳ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದ ಪಾಲಿನ ಅನುದಾನ ಮಂಜೂರು ಮಾಡಿಸುವಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪಾತ್ರ ತುಂಬಾ ಇದೆ. ಆದರೆ, ಶಿಷ್ಟಾಚಾರದ ಅನ್ವಯ ಅವರನ್ನೇ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ’ ಎಂದು ದೂರಿದರು.

‘ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 38 ಕೊಳಚೆ ಪ್ರದೇಶಗಳಿದ್ದು, ಇಂದಿಗೂ ಮೂಲಸೌಕರ್ಯಗಳಿಂದ ವಂಚಿತವಾಗಿವೆ. ಶಾಸಕ ಪ್ರಸಾದ ಅಬ್ಬಯ್ಯ ಅವರು ತಮ್ಮ ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ತೋರಿಸಲಿ’ ಎಂದರು.

ಬಿಜೆಪಿ ಮುಖಂಡರಾದ ಪ್ರಕಾಶ ಕ್ಯಾರಕಟ್ಟಿ, ಸಂತೋಷ ಅರಕೇರಿ ಅವರು, ‘ಮನೆಗಳ ಹಂಚಿಕೆಯಲ್ಲಿ ಕಾಂಗ್ರೆಸ್ ಸರ್ಕಾರವು ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿಯಲ್ಲಿ ಎಲ್ಲಾ ವರ್ಗದ ಬಡವರಿಗೆ ಮನೆಗಳ ಹಂಚಿಕೆ ಮಾಡಬೇಕು. ನಿರ್ಲಕ್ಷಿಸಿದ್ದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುತ್ತದೆ’ ಎಂದರು.

ಬಿಜೆಪಿ ಮುಖಂಡರಾದ ಮಂಜುನಾಥ ಕಾಟಕರ, ಶಿವುಕುಮಾರ ಮೆಣಸಿನಕಾಯಿ, ಶಶಿಕಾಂತ ಬಿಜವಾಡ, ಅನೂಪ ಬಿಜವಾಡ, ವಿಜಯ ಗುಂಟ್ರಾಳ, ರಾಜು ಕೋರ್ಯಾಣಮಠ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.