ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವೀಣ್ ಹಂತಕರನ್ನು ಎನ್‌ಕೌಂಟರ್ ಮಾಡಿ: ಪ್ರಮೋದ್‌ ಮುತಾಲಿಕ್‌

ಕಾರವಾರ, ವಿಜಯಪುರದಲ್ಲಿ ಯುವ ಮೋರ್ಚಾ ಪದಾಧಿಕಾರಿಗಳ ರಾಜೀನಾಮೆ
Last Updated 29 ಜುಲೈ 2022, 4:26 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು‌ ಅವರ ಹಂತಕರನ್ನು ಎನ್‌ಕೌಂಟರ್ ಮಾಡಬೇಕು. ಇಲ್ಲವೇ ಒಂದು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ‌ ಗಲ್ಲು ಶಿಕ್ಷೆ ವಿಧಿಸಬೇಕು’ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು, ‘ಹಿಂದೂ ಸಂಘಟನೆಗಳ ನೆರವಿನಿಂದ ಅಧಿಕಾರ ಪಡೆದ ಬಿಜೆಪಿ ಸರ್ಕಾರ, ಹಿಂದೂಗಳ ರಕ್ಷಣೆ ವಿಚಾರದಲ್ಲಿ ಸಂಪೂರ್ಣ ವಿಫಲವಾಗಿದೆ. ಮುಂದಿನ ಚುನಾವಣೆಯಲ್ಲಿ ಪರ್ಯಾಯ ರಾಜಕೀಯ ಶಕ್ತಿ ಅಗತ್ಯವಿದೆ’ ಎಂದು ಹೇಳಿದರು.

'30 ಮಂದಿ ಹಿಂದೂಗಳ ಹತ್ಯೆ ವಿಚಾರವನ್ನು ಬಿಜೆಪಿ ಅಧಿಕಾರ ಪಡೆಯಲಷ್ಟೇ ಬಳಸಿಕೊಳ್ಳುತ್ತಿದೆ. ಹತ್ಯೆ‌ಮಾಡಿದವರು ಜಾಮೀನು ಪಡೆದು ಆರಾಮಾಗಿ ಇದ್ದಾರೆ. ಪಿಎಫ್ಐ, ಎಸ್ ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು. ಹಿಂದೂಗಳ ರಕ್ಷಣೆ ಸಾಧ್ಯವಾಗದಿದ್ದರೆ ಎಲ್ಲರೂ ರಾಜೀನಾಮೆ ಕೊಡಲಿ. ನಮಗೆ ಅಧಿಕಾರ ಕೊಟ್ರೆ ಜಿಹಾದಿ ಮನಸ್ಥಿತಿಗಳನ್ನು ಮಟ್ಟ ಹಾಕುತ್ತೇವೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT