ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಪ್ರತಿಭಟನೆ ವೇಳೆ ಹೂ ನೀಡಲು ಯತ್ನ: ‘ಕೈ’ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

Last Updated 26 ಫೆಬ್ರುವರಿ 2022, 13:23 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವಿಧಾನಸಭೆ ಅಧಿವೇಶನಕ್ಕೆ ಕಾಂಗ್ರೆಸ್‌ ಅಡ್ಡಗಾಲು ಹಾಕಿದೆ ಎಂದು ಆರೋಪಿಸಿರುವ ಬಿಜೆಪಿ ಇದನ್ನು ವಿರೋಧಿಸಲು ಶನಿವಾರನಗರದಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಂಡಿದೆ.

ಈ ಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿಯವರಿಗೆ ಗುಲಾಬಿ ಹೂ ನೀಡಿ ವಿರೋಧ ವ್ಯಕ್ತಪಡಿಸಲು ಬಂದಿದ್ದರು. ಆಗ ಪೊಲೀಸರು ಕಾಂಗ್ರೆಸ್‌ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ದೇಶಪಾಂಡೆನಗರದ ಕೃಷ್ಣ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಆಯೋಜನೆಯಾಗಿದ್ದು, ಶಾಸಕ ಜಗದೀಶ ಶೆಟ್ಟರ್‌, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT