ಮಂಗಳವಾರ, ಅಕ್ಟೋಬರ್ 19, 2021
23 °C

ಎಚ್‌ಡಿಕೆ, ಸಿದ್ದರಾಮಯ್ಯಗೆ ಆರ್‌ಎಸ್‌ಎಸ್‌ ಮೇಲೆ ಬಹಳ ಪ್ರೀತಿ ಬಂದಿದೆ: ಶೆಟ್ಟರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಚುನಾವಣೆಯಲ್ಲಿ ಮುಸ್ಲಿಮರ ಮತಗಳನ್ನು ಗಳಿಸಲು ಎಚ್‌.ಡಿ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಆರ್‌ಎಸ್‌ಎಸ್‌ ಅನ್ನು ಟೀಕಿಸುತ್ತಿದ್ದಾರೆ. ಇದರಿಂದ ಅವರಿಗೆ ಏನೂ ಲಾಭವಾಗುವುದಿಲ್ಲ ಎಂದು ಶಾಸಕ ಜಗದೀಶ ಶೆಟ್ಟರ್‌ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ’ಸಾಕಷ್ಟು ಮುಸ್ಲಿಂ ನಾಯಕರು ಆರ್‌ಎಸ್‌ಎಸ್‌ ಅನ್ನು ಒಪ್ಪಿಕೊಂಡಿದ್ದಾರೆ. ಹಿಂದೆ ದೇವೇಗೌಡರು ಕೂಡ ಮೆಚ್ಚಿಕೊಂಡಿದ್ದರು. ಇವರ ಟೀಕೆಯಿಂದಾಗಿ ಆರ್‌ಎಸ್‌ಎಸ್‌ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಇನ್ನಷ್ಟು ಬಲಿಷ್ಠವಾಗಿ ಬೆಳೆಯುತ್ತದೆ’ ಎಂದರು.

’ತುಷ್ಠೀಕರಣ ರಾಜಕಾರಣಕ್ಕಾಗಿ ಆರ್‌ಎಸ್‌ಎಸ್‌ ಅನ್ನು ಟೀಕಿಸಲಾಗುತ್ತಿದೆ. ಸಂಘದಿಂದ ಭಾರತದ ಮೂಲ ಸಂಸ್ಕೃತಿ ಉಳಿಸುವ ಕೆಲಸವಾಗುತ್ತಿದೆ. ಈಗ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರಿಗೆ ಸಂಘದ ಮೇಲೆ ಬಹಳ ಪ್ರೀತಿ ಬಂದಿದೆ’ ಎಂದು ಚಟಾಕಿ ಹಾರಿಸಿದರು.

ಸಿಂದಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ‘ಯಾರನ್ನು ಕಣಕ್ಕಿಳಿಸಬೇಕು ಎನ್ನುವುದು ಆಯಾ ಪಕ್ಷಕ್ಕೆ ಬಿಟ್ಟ ವಿಚಾರ. ಇದನ್ನು ಟೀಕಿಸುವ ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ಮತಗಳನ್ನು ಗಳಿಸುವ ವಿಶ್ವಾಸವಿಲ್ಲವೇ’ ಎಂದು ಪ್ರಶ್ನಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು