ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಹುಬ್ಬಳ್ಳಿ: ಮಧು ಬಂಗಾರಪ್ಪ ಕಾಂಗ್ರೆಸ್‌ ಸೇರ್ಪಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಜೆಡಿಎಸ್‌ ತೊರೆದಿದ್ದ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂಬಂಧ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ‌, ʼಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಯುವ ನಾಯಕ ಮತ್ತು ಮಾಜಿ ಶಾಸಕ ಮಧು ಬಂಗಾರಪ್ಪನವರಿಗೆ ಸ್ವಾಗತ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ ಜನಪರ ಕಾಳಜಿಯನ್ನು ಮಧು ಅವರಲ್ಲಿಯೂ ನಾನು ಕಾಣುತ್ತಿದ್ದೇನೆ. ಅವರು ಬಯಸಿದ ಎಲ್ಲ ಯಶಸ್ಸುಗಳು ಅವರಿಗೆ ಒದಗಿಬರಲಿʼ ಎಂದು ಆಶಿಸಿದ್ದಾರೆ.

 

'ನನ್ನ ರಾಜಕೀಯ ಗುರುಗಳಾದ ಶ್ರೀ ಎಸ್.ಬಂಗಾರಪ್ಪನವರ ಪುತ್ರ ಶ್ರೀ ಮಧು ಬಂಗಾರಪ್ಪನವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳಲು ಸಂತೋಷವೆನಿಸುತ್ತಿದೆ! ಸಮಾನ ಮನಸ್ಕರ ಜೊತೆಗೂಡಿ ಪಕ್ಷದ ಬಲವರ್ಧನೆ ಮಾಡುವುದು ನಮ್ಮ ಗುರಿಯಾಗಿದ್ದು, ಶ್ರೀ ಮಧು ಬಂಗಾರಪ್ಪನವರು ಆ ನಿಟ್ಟಿನಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವರೆಂಬ ವಿಶ್ವಾಸ ನನಗಿದೆ' ಏಂದು ಡಿ.ಕೆ.ಶಿವಕುಮಾರ್‌ ಟ್ವೀಟ್‌ ಮಾಡಿದ್ದಾರೆ.

 

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು