ಧಾರವಾಡ: ‘ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಹೆಸರುಗಳು ಕೇಳಿ ಬಂದಿದ್ದು, ಇಬ್ಬರೂ ರಾಜ್ಯದ ಜನತೆಗೆ ಇದರ ಬಗ್ಗೆ ಸ್ಪಷ್ಟೀಕರಣ ನೀಡಬೇಕು’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒತ್ತಾಯಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಉಲ್ಲೇಖಿಸದೆ ‘ಇವರಿಬ್ಬರೂ ರಾಜಕೀಯದಲ್ಲಿ ದೊಡ್ಡ ಸ್ಥಾನ ಅಲಂಕರಿಸಿದ್ದು, ಈಗ ಇವರ ಹೆಸರುಗಳನ್ನು ಐಎಂಎ ನಿರ್ದೇಶಕ ತನಿಖೆ ವೇಳೆ ಹೇಳಿರುವುದಾಗಿತಿಳಿದು ಬಂದಿದೆ. ಈ ತನಿಖೆ ತಾರ್ಕಿಕ ಅಂತ್ಯಕ್ಕೆ ಬರಬೇಕು ಹಾಗೂ ಬಡ ಜನರಿಗೆ ನ್ಯಾಯ ಸಿಗಬೇಕು. ಇಬ್ಬರು ರಾಜಕಾರಣಿಗಳು ಕರ್ನಾಟಕದ ಜನತೆಗೆ ಐಎಂಎ ನಿರ್ದೇಶಕನ ಹೇಳಿಕೆಗೆ ಉತ್ತರ ನೀಡಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.