ಸೋಮವಾರ, ಜನವರಿ 20, 2020
26 °C

ಕಾಶ್ಮೀರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಪ್ರಹ್ಲಾದ ಜೋಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕಾಶ್ಮೀರದಲ್ಲಿ ಜ.18ರಿಂದ 24ರ ವರೆಗೆ ಕೇಂದ್ರ ಸರ್ಕಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘370 ಎ ಕಾಯ್ದೆ ರದ್ದು ಪಡಿಸಿದ ನಂತರ ಕಾಶ್ಮೀರದಲ್ಲಿ ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಈಗ ಅವರೇ ಸ್ವಾಗತಿಸುತ್ತಿದ್ದು, ಅಭಿವೃದ್ಧಿಯನ್ನು ಎದುರು ನೋಡುತ್ತಿದ್ದಾರೆ. ಅಭಿವೃದ್ಧಿಯ ನಿಟ್ಟಿನಲ್ಲಿ ಕೇಂದ್ರದ ಎಲ್ಲ ಸಚಿವರು ಒಂದು ವಾರ ಅಲ್ಲಿದ್ದು ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡಲು ನಿರ್ಧರಿಸಿದ್ದಾರೆ’ ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು